ಕಲಬುರಗಿ | ಅಪಘಾತದ ಸ್ಥಳದಲ್ಲೇ ರಸ್ತೆ ತಡೆದು ದಿಢೀರ್ ಪ್ರತಿಭಟನೆ; 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

Date:

ಕಲಬುರಗಿ ನಗರದ ರಿಂಗ್ ರಸ್ತೆಯ ಶಾ ಜಿಲಾನಿ ಕ್ರಾಸ್ ಬಳಿ ಸಂಭವಿಸಿದ ಅಪಘಾತದ ಹಿನ್ನೆಲೆ ಸ್ಥಳೀಯರು ಅಪಘಾತದ ಸ್ಥಳದಲ್ಲೇ ರಸ್ತೆ ತಡೆದು ದಿಢೀರ್ ಪ್ರತಿಭಟನೆ ಮಾಡಿ ಘಟನೆ ಭಾನುವಾರ ನಡೆದಿದೆ.

ಟಿಪ್ಪರ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ರಿಂಗ್ ರಸ್ತೆಯಿಂದ ಸರ್ವಿಸ್ ರಸ್ತೆಗೆ ನುಗ್ಗಿ ಬೈಕ್‌ಗೆ ಹಾಗೂ ಅಲ್ಲೇ ನಿಂತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ಸುಮಾರು ಮೂರು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ದೋರನಹಳ್ಳಿಯಲ್ಲಿ ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

‘ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರೂ ರಸ್ತೆ ತಡೆ ಮುಂದುವರಿದ ಹಿನ್ನೆಲೆಯಲ್ಲಿ, ರಸ್ತೆ ತಡೆ ಹಾಗೂ ಸಾರ್ವಜನಿಕ ಶಾಂತಿ ಭಂಗ ಆರೋಪದಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚು ಜನರ ವಿರುದ್ಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...