ಕಲಬುರಗಿ | ನೀರಿನ ತುರ್ತು ಸೇವೆಗೆ ‘ಸ್ವಿಚ್ ಆಫ್’ ಸಂದೇಶ: ಪಾಲಿಕೆ ಎಂಜಿನಿಯರ್ ನಡೆಗೆ ಜನ ಆಕ್ರೋಶ

Date:

ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಕಲಬುರಗಿ ಮಹಾನಗರ ಪಾಲಿಕೆ ರಚಿಸಿರುವ ‘ತುರ್ತು ಪರಿಹಾರ ತಂಡ’ದ ಎಂಜಿನಿಯರ್ ಒಬ್ಬರು ತಮ್ಮ ಮೊಬೈಲ್‌ಗೆ ‘ಸ್ವಿಚ್ ಆಫ್’ ಎಂಬ ಕಾಲರ್ ಟ್ಯೂನ್ ಸೆಟ್ ಮಾಡಿಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ನಗರದ 37, 45 ಹಾಗೂ 44ನೇ ವಾರ್ಡ್‌ಗಳಿಗೆ ನೆಟ್ವರ್ಕ್ ಎಂಜಿನಿಯರ್ ಆಗಿರುವ ಅನಿಲ್ ಎಂಬುವವರು ತುರ್ತು ಸಂಪರ್ಕ ಸಂಖ್ಯೆಗೆ ‘ಸ್ವಿಚ್ ಆಫ್’ ಎಂಬ ಕಾಲರ್ ಟ್ಯೂನ್ ಇಟ್ಟಿರುವುದು ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಸಾರ್ವಜನಿಕರು ಸಮಸ್ಯೆ ತಿಳಿಸಲು ಕರೆ ಮಾಡಿದಾಗ ಸಾಮಾನ್ಯ ರಿಂಗ್ ಟೋನ್ ಬದಲಿಗೆ ‘ಸ್ವಿಚ್ ಆಫ್’ ಎಂಬ ಧ್ವನಿ ಕೇಳಿಬರುತ್ತಿದ್ದು, ಫೋನ್ ನಿಜವಾಗಿಯೂ ಬಂದ್ ಆಗಿದೆ ಎಂಬ ಭಾವನೆ ಮೂಡಿ ಹಲವರು ಕರೆ ಸ್ಥಗಿತಗೊಳಿಸುತ್ತಿದ್ದಾರೆ.

ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪಾಲಿಕೆಯು ವಿಶೇಷ ತುರ್ತು ಸ್ಪಂದನೆ ತಂಡವನ್ನು ರಚಿಸಿತ್ತು. ಆದರೆ ತುರ್ತು ಸೇವೆಗೆ ನಿಯೋಜಿತ ಎಂಜಿನಿಯರ್ ಇಂತಹ ಕಾಲರ್ ಟ್ಯೂನ್ ಬಳಸಿರುವುದು ಜನರಲ್ಲಿ ಗೊಂದಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದಾಗಲೇ ಫೋನ್ ಆಫ್ ಎಂದು ಕೇಳಿಸಿದರೆ, ನಾವು ಯಾರನ್ನು ಸಂಪರ್ಕಿಸಬೇಕು? ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಈ ಕುರಿತು ಪಾಲಿಕೆ ಅಧಿಕಾರಿಗಳು ತಕ್ಷಣ ಸ್ಪಷ್ಟನೆ ನೀಡಬೇಕು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...