ಕಲಬುರಗಿ | ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Date:

ಕರ್ನಾಟಕ ಪ್ರತಿಭಾ ಅಕಾಡೆಮಿ ಕಲಬುರಗಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬುಧವಾರ ನಗರದ ಬಸವ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ತೃಪ್ತಿ ಎಸ್. ಲಾಖೆ ಅವರು ಮಾತನಾಡಿ, ‘ಧೈರ್ಯದಿಂದ ಮುಂದುವರಿದರೆ ಎಲ್ಲವೂ ಸಾಧ್ಯ. ಸೋಲನ್ನು ಎಂದಿಗೂ ಒಪ್ಪಿಕೊಳ್ಳಬಾರದು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ತಮ ವಿದ್ಯಾಭ್ಯಾಸದಿಂದ ಜೀವನದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಸಾಧ್ಯವಾಗುತ್ತದೆ. ಘನತೆ ಹಾಗೂ ಗೌರವದ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಪ್ರಮುಖ ಸಾಧನ’ ಎಂದು ತಿಳಿಸಿದರು.

ಇದೆ ವೇಳೆ ಹುಲಿಗೆಪ್ಪ ಕನಕಗಿರಿ ಅವರು ಮಾತನಾಡಿ, ‘ಓದಿನ ಜೊತೆಗೆ ನಮ್ಮ ಆಚಾರ-ವಿಚಾರ ಮತ್ತು ಸಂಸ್ಕೃತಿಗಳನ್ನು ಉಳಿಸುವ ಜವಾಬ್ದಾರಿ ನಮ್ಮದಾಗಬೇಕು ಎಂದರು. 371(ಜೆ) ಕಲಂ ಜಾರಿಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಹುದ್ದೆಗಳನ್ನು ಸಾಧಿಸಬೇಕು’ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
991065

ವಿಶೇಷ ಉಪನ್ಯಾಸ ನೀಡಿದ ಡಾ. ಶಿವರಂಜನ್ ಸತ್ಯಂಪೇಟ್ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಅತ್ಯಂತ ಅಗತ್ಯ ಎಂದು ಹೇಳಿದರು. ‘ಶಿಕ್ಷಣವೇ ನಮ್ಮ ನಿಜವಾದ ಸಂಪತ್ತು. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರು ಓದು ಮತ್ತು ಚಿಂತನೆಯ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ವಿಚಾರಗಳನ್ನು ಬಿತ್ತಿದರು. ತಲೆ ತಗ್ಗಿಸಿ ಪುಸ್ತಕ ಓದಿದರೆ, ಅದು ತಲೆ ಎತ್ತಿ ಬದುಕುವ ಶಕ್ತಿಯನ್ನು ನೀಡುತ್ತದೆ’ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವದ ಅತ್ಯಂತ ಪ್ರತಿಭಾವಂತ ಚಿಂತಕರಲ್ಲಿ ಪ್ರಮುಖರಾಗಿದ್ದು, ಅವರನ್ನು ಇಡೀ ಜಗತ್ತು ವಿಶ್ವಜ್ಞಾನಿ ಎಂದು ಕರೆಯುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಕಲಬುರಗಿ ಮಹಾನಗರ ಪಾಲಿಕೆ ವಲಯ ಕಚೇರಿ–1ರ ಆಯುಕ್ತ ಗೌತಮ ಕಾಂಬಳೆ, ವಸತಿ ನಿಲಯ ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಧರ ಕಾಂಬಳೆ ಹಾಗೂ ಹಿರಿಯ ವಕೀಲ ಸೈಯಾದ್ ಮಜರ್ ಹುಸೇನ್ ಮಾತನಾಡಿದರು. ಈ ವೇಳೆ ರೇಣುಕಾ ಸರಡಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಮರ್ಯಾದೆ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಸಂಸ ಪ್ರತಿಭಟನೆ

ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಕೆ. ಜವಳಿ ಅಧ್ಯಕ್ಷತೆ ವಹಿಸಿದ್ದರು. ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಸಂಚಾಲಕ ಸುನಿಲ್ ಮಾನಪಡೆ ಪ್ರಸ್ತಾವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರವಣಕುಮಾರ ಮೋಸಲಗಿ, ಮೈಲಾರಿ ದೊಡ್ಡಮನಿ, ಮಂಜುನಾಥ ಗಂಗಕರ್, ಮಲ್ಲಿಕಾರ್ಜುನ ಬೋಳಣಿ, ಕಾಶಿನಾಥ ಸಿಂಧೆ, ಭಗವಂತ ಆರ್. ವಗ್ಗೆ, ಆಕಾಶ ನಂದಾ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...