ಕಲಬುರಗಿ | ವಕೀಲನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಶೋಧ

Date:

ದುಷ್ಕರ್ಮಿಗಳು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಹಾಡಹಗಲೇ ವಕೀಲನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ನಗರದ ಸಾಯಿ ಮಂದಿರದ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದ್ದು, ಈರಣ್ಣಗೌಡನನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಈರಣ್ಣಗೌಡ ಬೈಕ್​ನಲ್ಲಿ ಕೋರ್ಟ್​ಗೆ ಹೋಗುವ ವೇಳೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಈರಣ್ಣ ಅವರು ಬೈಕ್ ಬಿಟ್ಟು ತಮ್ಮ ಅಪಾರ್ಟ್‌ಮೆಂಟ್ ಕಡೆ ಓಡಿದ್ದಾರೆ. ಅಲ್ಲದೇ ಇನ್ನೇನು ಜೇಬಿನಲ್ಲಿದ್ದ ಗನ್ ತೆಗೆಯುವಷ್ಟರಲ್ಲೇ ದುಷ್ಕರ್ಮಿಗಳು ವಕೀಲನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಸ್ಕ್ ಧರಿಸಿದ್ದ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಕೊನೆಗೆ ಈರಣ್ಣನ ಅರ್ಪಾಟ್ ಮೆಂಟ್​ನಲ್ಲೇ ಹತ್ಯೆ ಮಾಡಿದ್ದಾರೆ. ಇನ್ನು ಈರಣ್ಣ ಲೈಸೆನ್ಸ್ ಗನ್​ ಹೊಂದಿದ್ದು, ಅದನ್ನು ತೆಗೆಯಬೇಕು ಎನ್ನುವಷ್ಟರಲ್ಲೇ ಅವರನ್ನು ಹತ್ಯೆ ಮಾಡಿದ್ದಾರೆ. ಈರಣ್ಣ ಗನ್ ತೆಗೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಜೀವ ರಕ್ಷಣೆಗಾಗಿ ಗನ್ ಪಡೆದುಕೊಂಡಿದ್ದರೂ ಉಪಯೋಗವಿಲ್ಲದಂತಾಗಿದೆ.

ಹಾಡಹಗಲೇ ವಕೀಲನ ಭೀಕರ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸೇಂದಿ ದಂಧೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಪೊಲೀಸ್ ಆಯುಕ್ತ ಆರ್ ಚೇತನ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ವಕೀಲರು ಕೋರ್ಟ್‌ಗೆ ಹೋಗುವಾಗ ಕಿಡಿಗೇಡಿಗಳು ಅವರ ಮೇಲೆ ಅಟ್ಯಾಕ್ ಮಾಡಿದ್ದಾರೆ. ಸದ್ಯ ಕಿಡಿಗೇಡಿಗಳ ಬಂಧನಕ್ಕೆ ಎರಡು ತಂಡ ರಚನೆ ಮಾಡಿದ್ದು, ಸ್ಥಳದಲ್ಲಿ ಸಿಕ್ಕ ಕೆಲ ಮಾಹಿತಿ ಮೇರೆಗೆ ನಮ್ಮ ತಂಡ ಹತ್ಯೆ ಆರೋಪಿಗಳ ಜಾಡು ಹಿಡಿದು ಹೋಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಮೃತ ವಕೀಲರ ಮನೆಯವರು ಏನು ದೂರು ನೀಡುತ್ತಾರೋ ಅದರ ಆಧಾರದ ಮೇಲೆಯೂ ತನಿಖೆ ಮಾಡುತ್ತೇವೆ. ಎಷ್ಟು ಜನ ಇದ್ದರು ಎನ್ನುವ ಮಾಹಿತಿ ನಿಖರವಾಗಿ ಗೊತ್ತಾಗಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...