ಕಲಬುರಗಿ | ಸಂಕಷ್ಟಕ್ಕೆ ಸಿಲುಕಿದ ತೊಗರಿ ಬೆಳೆಗಾರರು; ಪರಿಹಾರಕ್ಕೆ ಆಗ್ರಹ

Date:

ತೊಗರಿಯ ನಾಡು ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಭೂಮಿಯಲ್ಲಿ ಹಸಿ ತೆಂವಾಂಶ ಹೆಚ್ಚಾಗಿ ಬೇರು ಕೊಳೆತು ತೊಗರಿ ಒಣಗುತ್ತಿದೆ ಎಂದು ತೊಗರಿ ಬೆಳೆಗಾರರು ಹಾಗೂ ಕೆಪಿಆರ್‌ಎಸ್‌ ಕಲಬುರಗಿ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

“ಮುಂಗಾರು ಕೈಕೊಟ್ಟಿದ್ದರೂ ಅಲ್ಪ ಸ್ವಲ್ಪ ಮಳೆಗೆ ಬಂದಿದ್ದ ತೊಗರಿ ಬೆಳೆಯನ್ನು ಉಳಿಸಿಕೊಳ್ಳಲಾಗಿತ್ತು. ಇದೀಗ ಸುರಿದ ಧಾರಾಕಾರ ಮಳೆಯಿಂದ ತೇವಾಂಶ ಹಾಚ್ಚಾಗಿ ಬೇರು ಕೊಳೆಯುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಬಿಜ, ರಸಗೊಬ್ಬರ, ಕಳೆ ತೆಗೆಯುವುದು, ಔಷಧಿ ಸಿಂಪಡಣೆ ಸೇರಿದಂತೆ ಹಲವು ಕೆಲಸಗಳಿಗೆ ಹಣ ಖರ್ಚು ಮಾಡಿದ್ದು, ರೈತರು ಸಾಲದ ಮಡುವಿನಲ್ಲಿ ಒದ್ದಾಡುವಂತಾಗಿದೆ” ಎಂದು ಹೇಳಿದರು.

“ಹೊಲಕ್ಕೆ ಹೋಗಿ ತೊಗರಿ ಬೆಳೆ ನೋಡಿದ ಕೂಡಲೇ ತೊಗರಿ ಬಿತ್ತಿದ ರೈತರು ಜಿಗುಪ್ಸೆಗೊಂಡು ನೆಲಕ್ಕೆ ಉರುಳಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವೀರಭದ್ರಪ್ಪ ಇಂದ್ರಪಾಡ ಹೊಸಳ್ಳಿ ಗ್ರಾಮದ ರೈತ ತೊಗರಿ ಬೆಳೆಯ ಅವಸ್ಥೆ ಕಂಡು ಗಾಬರಿಗೊಂಡಿದ್ದಾರೆ. ತೊಗರಿ ಬೆಳೆಗಾರರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣವೇ ತೊಗರಿ ಬೆಳೆಗಾರರ ನೆರವಿಗೆ ಬರಬೇಕು. ಆಣೆವಾರು ಪರಿಹಾರ ಘೋಷಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆಗೆ ಗೊಣ್ಣೆಹುಳು ಬಾಧೆ; ಅಗತ್ಯ ಕ್ರಮಕ್ಕೆ ಕೃಷಿ ಅಧಿಕಾರಿಗಳ ಸಲಹೆ

“ಕಲಬುರಗಿ ಜಿಲ್ಲೆ ತೊಗರಿ ಕಣಜ ಎಂದೇ ಖ್ಯಾತಿ ಪಡೆದಿದೆ. ತೊಗರಿ ಕಣಜದಲ್ಲಿ ರೈತರ ಗತಿ ಅಧೋಗತಿಯಾಗಿದೆ. ಈಗಾಗಲೇ ಸಾಲದ ಮಡುವಿನಲ್ಲಿ ಒದ್ದಾಡುತ್ತಿರುವ ರೈತರು ತಮ್ಮ ಭೂಮಿ ಹದಾ ಮಾಡಿ ಏನು ಬೆಳೆ ಬಿತ್ತನೆ ಮಾಡಬೇಕೆಂದು ಯೋಚಿಸುತ್ತಿದ್ದು, ಕಡಲೆ, ಜೋಳ, ಕುಸುಬೆ ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಹಣವಿಲ್ಲದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಜಂಟಿ ಸರ್ವೆ ಬೆಳೆನಷ್ಟ ಸಮೀಕ್ಷೆ ಮಾಡಿ ಶೀಘ್ರದಲ್ಲೇ ಬೆಳೆವಿಮೆ ಹಣ ಬಿಡುಗಡೆ ಮಾಡಬೇಕು. ಜತೆಗೆ ಆಣೆವಾರು ಪರಿಹಾರ ಘೋಷಿಸಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು” ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದರು.

ಕೆಪಿಆರ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಸಾಯಿಬಣ್ಣ ಗುಡುಬಾ, ಸುಭಾಷ್ ಹೊಸಮನಿ, ದಿಲೀಪ್ ಕುಮಾರ್, ರಾಯಪ್ಪ ಹುರಮುಂಜಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...