ಕಲಬುರಗಿ ನಗರದ ಪಟ್ಟಣ ಟೋಲ್ ನಾಕಾ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
‘ಮೃತನನ್ನು ಬಸವರಾಜ ಅಲಿಯಾಸ್ ಬಸಯ್ಯ ತಂದೆ ಮಲ್ಲಯ್ಯ ಮಠಪತಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಸದ್ದಾಂ ತಂದೆ ಇಸ್ಮಾಯಿಲ್ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಹೆಚ್ಚಿನ ಲಾಭದ ಆಮಿಷವೊಡ್ಡಿ ಹೂಡಿಕೆ ಪ್ರಚೋದನೆ: ಜೆಸ್ಕಾಂ ನಿವೃತ್ತ ನೌಕರರಿಂದ ₹2.24 ಕೋಟಿ ವಂಚನೆ
‘ಅಪಘಾತದ ಮಾಹಿತಿ ಪಡೆದ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿದು ಬಂದಿದೆ.





