ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆ
ನಗರದ ಹೀರಾಪೂರ ಪ್ರದೇಶದ ರೈಲ್ವೆ ಬ್ರಿಡ್ಜ್ ಸಮೀಪದ ಮಾದರಸನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ.
ಮೃತರನ್ನು ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ ನಿವಾಸಿ ಶಿವಕುಮಾರ್ ಕಾಶೀನಾಥ್ ನಂದೂರಕರ್ (52) ಹಾಗೂ ಇಂದಿರಾ ನಗರದ ನಿವಾಸಿ ರತನ್ ಭುಜಂಗರಾವ ಹೊಟ್ಕರ್ (60) ಎಂದು ಗುರುತಿಸಲಾಗಿದೆ.
ಇಬ್ಬರೂ ಆಪ್ತ ಸ್ನೇಹಿತರಾಗಿದ್ದು, ಆಗಾಗ ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಬುಧವಾರ ಬೆಳಿಗ್ಗೆ ಶಿವಕುಮಾರ್ ಅವರ ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ವೇಳೆ ಒಳಗೆ ಸಂಗ್ರಹವಾಗಿದ್ದ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿಕೊಂಡು ಹೊರಬರಲಾರದೆ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಬಸ್, ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ
ಘಟನೆಗೆ ಸಂಬಂಧಿಸಿದಂತೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.





