ಕಲಬುರಗಿ | ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಕೆ ಪ್ರಕರಣ; ಪೊಲೀಸ್ ಕಸ್ಟಡಿಗೆ ಏಳು ಮಂದಿ ಆರೋಪಿಗಳು

Date:

ಕಲಬುರಗಿ ಜಿಲ್ಲೆಯ ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಕೆಇಎ ಪರೀಕ್ಷೆ ವೇಳೆ ಅಭ್ಯರ್ಥಿಗಳು ಬ್ಲೂಟೂತ್ ಬಳಸಿದ್ದ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕೆಇಎ ಪರೀಕ್ಷಾ ಅಭ್ಯರ್ಥಿಗಳಾದ ಬೀದರ್‌ ಮೂಲದ ಆಕಾಶ ಮಂಠಾಳೆ, ಸಂತೋಷ ಬಂಡೆಪ್ಪ ಯಾಳಗಿ ಮತ್ತು ಬಾಬು ಚಾಂದಶೇಖ್‌ ಅವರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಅವರಲ್ಲದೆ, ಆರೋಪಿತ ಅಭ್ಯರ್ಥಿಗಳಿಗೆ ನೆರವು ನೀಡಿದ್ದ ವಿಜಯಕುಮಾರ ಬಿರಾದಾರ, ಖಾಸಗಿ ಶಾಲೆಯ ಶಿಕ್ಷಕ ಬಾಪು ಗುತ್ತಪ್ಪ ಯಾಳಗಿ ಮತ್ತು ಗಣೇಶ್‌ ದುಂಡಪ್ಪನ ಎಂಬವರನ್ನೂ ಪೊಲೀಸರು ಬಂಧಿಸಿದ್ದರು. ಅವರನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಎಂಟು ದಿನಗಳ ಮಟ್ಟಿಗೆ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...