ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

Date:

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಶೂನ್ಯಕ್ಕಿಳಿಯಲು ವ್ಯವಸ್ಥಿತವಾದ ‘ಸುರಕ್ಷಾ ಜಾಲ’ವೊಂದು ರಾಜ್ಯಾದ್ಯಂತ ಕಾರ್ಯೋನ್ಮುಖವಾಗಬೇಕಿದೆ. ಆಗ ಮಾತ್ರ ಕಲ್ಯಾಣ ಕರ್ನಾಟಕದ ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕಲು ಸಾಧ್ಯ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಹೆಣ್ಣು ಮಕ್ಕಳ ನಾಪತ್ತೆ ಪ್ರಕರಣಗಳು ಏರುಗತಿಯಲ್ಲೇ ಸಾಗಿವೆ. ಸರಾಸರಿ ಲೆಕ್ಕಾಚಾರದ ಪ್ರಕಾರ, ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಹತ್ತಾರು ಮಹಿಳೆಯರು ಕಾಣೆಯಾಗುತ್ತಿದ್ದಾರೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗವೂ ಪಟ್ಟಿಯಲ್ಲಿದೆ. ಇವುಗಳಲ್ಲಿ ಕೆಲವು ಪ್ರಕರಣಗಳು ಸುಖಾಂತ್ಯ ಕಂಡರೂ, ಹೆಚ್ಚಿನವು ಇಂದಿಗೂ ನಿಗೂಢವಾಗಿಯೇ ಉಳಿದಿವೆ. ರಾಜ್ಯ ಗೃಹ ಇಲಾಖೆ ತೆರೆದಿಟ್ಟಿರುವ ಕಳೆದ ಮೂರು ವರ್ಷಗಳ ಅಂಕಿ-ಅಂಶಗಳು ತೀವ್ರ ಕಳವಳ ಮೂಡಿಸಿವೆ.

ಕಳೆದ 3 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಒಟ್ಟು 4,336 ಮಹಿಳೆಯರು ಮತ್ತು 764 ಹೆಣ್ಣು ಮಕ್ಕಳು ನಾಪತ್ತೆಯಾದ ಪ್ರಕರಣಗಳು ದಾಖಲಾಗಿವೆ. ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮಹಿಳೆಯರು-ಮಕ್ಕಳು ಸೇರಿ 2023-1,094, 2024-1,300, 2025-1,705 ಹಾಗೂ 2026ರ ಫೆಬ್ರವರಿ ಅಂತ್ಯದವರೆಗೆ ಒಟ್ಟು 237 ಮಹಿಳೆಯರು-ಮಕ್ಕಳು ಕಾಣೆಯಾಗಿರುವುದು ವರದಿಯಾಗಿದೆ.

2023ರಿಂದ 2026ರ ಫೆಬ್ರವರಿ ಅಂತ್ಯದವರೆಗೆ ಕಲ್ಯಾಣ ಕರ್ನಾಟಕದ ಕಲಬುರಗಿ (1,235), ರಾಯಚೂರು (808), ಬೀದರ್ (829), ವಿಜಯನಗರ (687) ಮತ್ತು ಕೊಪ್ಪಳ (701), ಬಳ್ಳಾರಿ (503) ಹಾಗೂ ಯಾದಗಿರಿ (336) ಜಿಲ್ಲೆಗಳು ನಾಪತ್ತೆಯಾದ ಮಹಿಳೆಯರ ಪ್ರಕರಣಗಳನ್ನು ದಾಖಲಿಸಿವೆ.

image 2026 03 20T170147.071

2023ರಲ್ಲಿ ನಾಪತ್ತೆಯಾದ 1,266 ಮಹಿಳೆಯರ ಪೈಕಿ 1,163 ಮಂದಿ ಪತ್ತೆಯಾಗಿದ್ದಾರೆ. 2024 ರಲ್ಲಿ 1,555 ಪ್ರಕರಣಗಳಲ್ಲಿ 1,508 ಮಂದಿ ಪತ್ತೆಯಾಗಿದ್ದಾರೆ. 2025ರಲ್ಲಿ 1,987 ಪ್ರಕರಣಗಳಲ್ಲಿ 1,781 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಪ್ರಸಕ್ತ 2026ರ ಮೊದಲ ಎರಡು ತಿಂಗಳಲ್ಲಿ ಒಟ್ಟು ಕಾಣೆಯಾದ 292 ಪ್ರಕರಣಗಳಲ್ಲಿ 101 ಮಾತ್ರ ಪತ್ತೆಯಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಏಳು ಜಿಲ್ಲೆಗಳಲ್ಲಿ ಪತ್ತೆಯಾಗದೇ ಉಳಿದಿರುವ 491 ಮಹಿಳೆಯರ ಬಗ್ಗೆ ಯಾವುದೇ ಸುಳಿವಿಲ್ಲ. ಇವರು ಎಲ್ಲಿದ್ದಾರೆ? ಅವರ ಸ್ಥಿತಿಯೇನು? ಎಂಬ ಪ್ರಶ್ನೆಗಳು ಕುಟುಂಬಸ್ಥರನ್ನು ಮತ್ತು ಸಾರ್ವಜನಿಕರನ್ನು ಇಂದಿಗೂ ಕಾಡುತ್ತಿವೆ. ಇಲ್ಲಿಯವರೆಗೆ ಪತ್ತೆಯಾಗದವರಲ್ಲಿ 652 ಜನ ಹೆಣ್ಣು ಮಕ್ಕಳಿದ್ದಾರೆ.

ನಾಪತ್ತೆಯಾದವರ ಪ್ರಕರಣಗಳನ್ನು ಕೌಟುಂಬಿಕ ಕಲಹಗಳು, ಆರ್ಥಿಕ ಸಮಸ್ಯೆಗಳು, ಪ್ರೇಮ ವಿವಾಹ, ಮನಸ್ತಾಪ, ಅಪಹರಣ ಇತರೆ ಕಾರಣದಿಂದ ಮನೆ ತೊರೆಯುವುದು, ಕಳ್ಳಸಾಗಣೆ, ಅಪಹರಣಗಳ ಬಲೆಗೆ ಸಿಕ್ಕಿರಬಹುದು ಎಂದು ವಿಭಾಗಿಸಲಾಗಿದೆ. ನಾಪತ್ತೆಯಾದ ಪ್ರಕರಣಗಳನ್ನು ನಿಭಾಯಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆಗಳು ಹಲವಾರು ಕ್ರಮಗಳನ್ನು ಕೈಗೊಂಡಿವೆ. ಆದರೂ ನಾಪತ್ತೆ ಪ್ರಕರಣಗಳ ಸಂಖ್ಯೆ ಇಳಿಯುತ್ತಿಲ್ಲ ಎಂಬುದು ಕಳವಳಕಾರಿಯಾಗಿದೆ.

ಕಾಣೆ, ಅಪಹರಣ ಪ್ರಕರಣಗಳು ವರದಿಯಾದ ಕೂಡಲೇ ರಾಜ್ಯದ ಎಲ್ಲಾ ಠಾಣೆಗಳಿಗೆ ಪ್ರಕರಣದ ಆರೋಪಿ ಮತ್ತು ಅಪಹರಿಸಿರುವ ಮಗುವಿನ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ. ಯಾವುದೇ ಸುಳಿವು ದೊರೆಯದೆ ಇದ್ದಲ್ಲಿ ಪೋಷಕರ ಒಪ್ಪಿಗೆ ಮೇರೆಗೆ ಪತ್ರಿಕಾ ಪ್ರಕಟಣೆ, ದೂರದರ್ಶನ, ಆಕಾಶವಾಣಿ ಇತ್ಯಾದಿ ಮಾಧ್ಯಮಗಳಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮಾನವ ಕಳ್ಳಸಾಗಾಣಿಕೆಯನ್ನು ತಡೆಗಟ್ಟಲು ರಾಜ್ಯದಲ್ಲಿ ಒಟ್ಟಾರೆ 43 ಎಹೆಚ್‌ಟಿಯು (Anti Human Trafficking Unit) ಗಳನ್ನು ಸ್ಥಾಪಿಸಲಾಗಿದೆ. ಕಾಣೆಯಾದ ಪ್ರಕರಣಗಳ ಪೈಕಿ 60 ದಿನದೊಳಗೆ ಪತ್ತೆಯಾಗದ ಪ್ರಕರಣಗಳನ್ನು ಪರಿಣಾಮಕಾರಿ ತನಿಖೆಗಾಗಿ ಎಹೆಚ್‌ಟಿಯು ವಿಶೇಷ ಘಟಕಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಕಳ್ಳಸಾಗಾಣಿಕೆದಾರರ ವಿರುದ್ಧ ಐಟಿಪಿಎ ಕಾಯ್ದೆ ಅನ್ವಯ ಕಾನೂನು ರೀತ್ಯಾ ಪ್ರಕರಣ ದಾಖಲಿಸಿ, ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತಿದೆ.

image 2026 03 20T170234.399

ಪೊಲೀಸ್‌ ಇಲಾಖೆಯು ವಿಶೇಷ ತಂಡ ರಚಿಸಿ ಪ್ರಕರಣಗಳ ಆಳವಾದ ತನಿಖೆ ನಡೆಸಿ, ನಾಪತ್ತೆಯಾದವರನ್ನು ಹುಡುಕುವ ಕೆಲಸ ಮಾಡುತ್ತಿದೆ. ಅಲ್ಲದೆ ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ಶಾಲಾ-ಕಾಲೇಜುಗಳನ್ನು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮಹಿಳೆಯರ ನಾಪತ್ತೆಯನ್ನು ತಡೆಗಟ್ಟಲು ಮತ್ತು ನಾಪತ್ತೆಯಾದವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ಸರ್ಕಾರ, ಸಮಾಜ, ಮತ್ತು ಕುಟುಂಬಗಳು ಒಟ್ಟಾಗಿ ಕೆಲಸ ಮಾಡಬೇಕಿದೆ.

ಇದನ್ನೂ ಓದಿ : ಔರಾದ್‌ | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ

ಕಾಣೆಯಾದವರನ್ನು ಹುಡುಕುವ ಜವಾಬ್ದಾರಿ ಪೊಲೀಸ್ ಇಲಾಖೆಯದ್ದು ಮಾತ್ರವಲ್ಲ. ಇದು ಸರ್ಕಾರ, ಸ್ವಯಂಸೇವಾ ಸಂಸ್ಥೆಗಳು ಮತ್ತು ಪ್ರತಿಯೊಂದು ಕುಟುಂಬದ ಸಾಮೂಹಿಕ ಹೊಣೆಗಾರಿಕೆಯಾಗಿದೆ. ಆಧುನಿಕ ತಂತ್ರಜ್ಞಾನದ ಸದ್ಬಳಕೆ, ಗಡಿ ಭಾಗಗಳಲ್ಲಿ ಬಿಗಿ ಕಾವಲು ಮತ್ತು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ನಿರಂತರ ಜಾಗೃತಿ ಮೂಡಿಸುವುದು ಅಗತ್ಯ. ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಶೂನ್ಯಕ್ಕಿಳಿಯಲು ವ್ಯವಸ್ಥಿತವಾದ ‘ಸುರಕ್ಷಾ ಜಾಲ’ವೊಂದು ರಾಜ್ಯಾದ್ಯಂತ ಬಲಗೊಳ್ಳಬೇಕಿದೆ. ಆಗ ಮಾತ್ರ ಕಲ್ಯಾಣ ಕರ್ನಾಟಕದ ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕಲು ಸಾಧ್ಯ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...