ಕಲಬುರಗಿ | ಸಾಂಬರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಗಾಯ; ಇಬ್ಬರು ಶಿಕ್ಷಕರ ಅಮಾನತು

Date:

ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ ಘಟನೆ ನಡೆದಿತ್ತು. ಘಟನೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಶಾಲೆಯ ಮುಖ್ಯಶಿಕ್ಷಕಿ ಲಾಲಬಿ ನಾದಾಫ್ ಹಾಗೂ ಸಹಶಿಕ್ಷಕ ರಾಜು ಚವ್ಹಾಣ ಅವರನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಆದೇಶ ಹೊರಡಿಸಿದ್ದಾರೆ.

ಊಟದ ಸಮಯದಲ್ಲಿ ವಿದ್ಯಾರ್ಥಿನಿ ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ, ಆಕೆ ಆಯತಪ್ಪಿ ಸಾಂಬರ್ ಪಾತ್ರೆಗೆ ಬಿದ್ದಿದ್ದಾಳೆ. ಆಕೆಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...