ಸೇಡಂ ತಾಲ್ಲೂಕಿನ ಕೊಡ್ಲಾ ಗ್ರಾಮದ ಸಮೀಪವಿರುವ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಜಾವ ಕಾರ್ಖಾನೆಯ ಕ್ಲಿಂಕರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ.
ಸೇಡಂ ತಾಲ್ಲೂಕಿನ ದುಗನೂರ ಗ್ರಾಮದ ವಿನೋದ್ ಹಣಮಂತ (28) ಮೃತಪಟ್ಟ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ.
ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಕಾರ್ಖಾನೆಯ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಾಲಬಾಧೆ : ರೈತ ಆತ್ಮಹತ್ಯೆ
ಘಟನೆ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





