ಸ್ಥಗಿತ ಸಂಶೋಧನೆಗಿಂತ ಚಲನಶೀಲ ಸಂಶೋಧಕರು ಅಗತ್ಯ ಎಂದು ಕಲಬುರ್ಗಿ ಹೇಳುತ್ತಿದ್ದರು: ಶರತ್‌ ಸ್ವಾಮೀಜಿ

Date:

ಸಂಶೋಧನೆ ಮೂಲಕ ಚರಿತ್ರೆಯ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಹೋರಾಡಬೇಕಿದೆ. ಸ್ಥಗಿತ ಸಂಶೋಧನೆಗಿಂತ ಸಮಾಜಕ್ಕೆ ಚಲನಶೀಲ ಸಂಶೋಧಕರು ಅಗತ್ಯ ಎಂದು ಕಲಬುರ್ಗಿ ಹೇಳುತ್ತಿದ್ದರು ಎಂದು ಮೈಸೂರಿನ ಕುಂದೂರು ಮಠದ ಡಾ. ಶರತ್ ಚಂದ್ರ ಸ್ವಾಮೀಜಿ ಹೇಳಿದರು.

ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ ಗು ಹಳಕಟ್ಟಿ ಸಂಶೋಧನಾ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಎಂ ಎಂ ಕಲಬುರ್ಗಿ ಸಮಗ್ರ ಸಾಹಿತ್ಯ 40 ಸಂಪುಟಗಳ ಲೋಕಾರ್ಪಣೆ ಹಾಗೂ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

“ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತಿದೆ. ಜೊತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೂ ಆಗುತ್ತಿದೆ. ಸಮಾಜ ಸಂಕೀರ್ಣವಾಗುತ್ತಿದೆ. ಜನರು ಸಂಕುಚಿತರಾಗುತ್ತಿದ್ದಾರೆ. ಈ ಸಂಕುಚಿತತೆ ತೆಗೆಯಬೇಕು ಎಂದರೆ ಕಲಬುರ್ಗಿ ಸಂಶೋಧನೆಗಳು ನಮಗೆ ಮಾರ್ಗದರ್ಶನವಾಗಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಶೋಧಕ ಡಾ. ಎಸ್ ಕೆ ಕೊಪ್ಪ ಮಾತನಾಡಿ, “ಕಲಬುರ್ಗಿಯವರ ಆಸಕ್ತ ಕ್ಷೇತ್ರಗಳ ಹರಿವು ದೊಡ್ಡದಿದೆ. ಸಂಶೋಧನೆ ಅವರ ಆತ್ಮವಾಗಿತ್ತು. ಕಳೆದ ಹೋದ ಚರಿತ್ರೆಯನ್ನು ಕಟ್ಟಿ ಕೊಟ್ಟಿದ್ದಾರೆ. ಕನ್ನಡ 30,000 ಶಾಸನಗಳ ಸಂಶೋಧಿಸಿ, ವಿಶ್ಲೇಷಿಸಿ ವ್ಯಾಖ್ಯಾನಿಸಿದ್ದಾರೆ” ಎಂದರು.

ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಮಾತನಾಡಿ, “ಕಲಬುರ್ಗಿ ಸಮಗ್ರ ಸಾಹಿತ್ಯ ಸಂಪುಟವು ಕಲಬುರ್ಗಿಯವರ ಮಹಾಮಾರ್ಗದ ಮಹಾಯಾನವಾಗಿದೆ. ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ, ಸಂಶೋಧಕರಿಗೆ, ವಿಶ್ವವಿದ್ಯಾಲಯಗಳಿಗೆ ಉಪಯುಕ್ತವಾದ, ಪ್ರೇರಣೆ ನೀಡುವ ಸಂಪುಟವಾಗಿವೆ” ಎಂದರು.

ಹಿರಿಯ ಸಂಶೋಧಕ ವೀರಣ್ಣ ರಾಜೂರ ಮಾತನಾಡಿ, “ಬೇರೆಯವರ ಹತ್ತು ಜನ್ಮಗಳಲ್ಲಿ ಮಾಡುವ ಸಂಶೋಧನಾ ಕೆಲಸವನ್ನು ಕಲಬುರ್ಗಿ ಅವರು ಒಂದೇ ಜನ್ಮದಲ್ಲಿ ಮಾಡಿದ್ದಾರೆ. ಬಸವಾದಿ ಶರಣರ ಸಾಹಿತ್ಯವನ್ನು ಬೆಳಕಿಗೆ ತಂದಿದ್ದಾರೆ” ಎಂದು ಸ್ಮರಿಸಿದರು.

ಬಸವಲಿಂಗ ಪಟ್ಟದೇವರು ಮಾತನಾಡಿ, “ಸಂಸ್ಕೃತಿ, ಸಾಹಿತ್ಯದಿಂದ ರಾಜಕಾರಣಿಗಳು ಬಹು ದೂರ. ಆದರೆ ಇದಕ್ಕೆ ಅಪವಾದ ಎಂಬಂತೆ ಸಚಿವ ಎಂ ಬಿ ಪಾಟೀಲರು ಹಳಕಟ್ಟಿ ಸಂಶೋಧನಾ ಕೇಂದ್ರದ ಚಟುವಟಿಕೆಗಳಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವ ಮೂಲಕ ಸಂಸ್ಕೃತಿ, ಸಾಹಿತ್ಯವನ್ನು ಪೋಷಣೆ ಮಾಡುವ ಕಾರ್ಯ ಮಾಡುತ್ತಿದ್ದಾರೆ” ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ | ಸೂಕ್ತ ಪರಿಹಾರ ನೀಡುವುದಾಗಿ ಅಧಿಕಾರಿಗಳ ಭರವಸೆ: ಧರಣಿ ಹಿಂಪಡೆದ ನಿರಾಶ್ರಿತರು

ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಮಾತನಾಡಿ, “ಬಸವಾದಿ ಶರಣರ ವಚನಗಳನ್ನು ಎಲ್ಲಾ ಭಾಷೆಗಳಿಗೆ ತರ್ಜುಮೆ ಮಾಡಿ, ವಿಶ್ವವ್ಯಾಪಿ ಪ್ರಸಾರಗೊಳಿಸುವ ಸಂಕಲ್ಪ ಮಾಡಿದ್ದು, ಈ ಕಾರ್ಯಕ್ಕೆ 5 ಕೋಟಿ ಅನುದಾನ ಒದಗಿಸುವೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾಂತೇಶ ಬಿರಾದಾರ, “ಕಲಬುರ್ಗಿ ಹಂತಕರು ವಿಜಯಪುರದಲ್ಲಿ ಇದ್ದಾರೆ. ಆದರೆ, ಅವರು ನಿಜವಾದ ಕೊಲೆಗಾರರಲ್ಲ. ಕಲಬುರ್ಗಿಯವರ ಬಗ್ಗೆ ಏನೂ ಗೊತ್ತಿಲ್ಲದವರಾಗಿದ್ದಾರೆ. ಕಲಬುರ್ಗಿಯವರ ಬಗ್ಗೆ ಗೊತ್ತಿರುವವರು ಇವರ ಮೂಲಕ ಕೊಲೆ ಮಾಡಿಸಿದರು. ಸಾಹಿತಿ ಯು ಆರ್ ಅನಂತಮೂರ್ತಿ ಅವರು ಭಾಷಣ ಒಂದರಲ್ಲಿ ಉಲ್ಲೇಖಿಸಿದ್ದನ್ನು ಟಿವಿ ವಾಹಿನಿ ಎಡಬಿಡದೆ ಪ್ರಸಾರ ಮಾಡಿ, ಜನರನ್ನು ಉದ್ರೇಕಿಸಿ, ಕಲಬುರ್ಗಿ ಅವರ ಹತ್ಯೆಗೆ ಪ್ರೇರಣೆ ನೀಡಿತು” ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಡಾ. ಕೆ ರವೀಂದ್ರನಾಥ, ಡಾ. ಎಫ್ ಟಿ ಹಳ್ಳಿಕೇರಿ, ಡಾ. ಗುರುಪಾದ ಮರಿಗುದ್ದಿ, ಡಾ. ಕೃಷ್ಣಾ ಕೋಲ್ಹರಾ, ಡಾ. ಎಂ ಎಸ್ ಮಾಧಬಾವಿ, ಡಾ. ಹನುಮಾಕ್ಷಿ ಗೋಗಿ, ಡಾ. ಸುಭಾಸ ಕನ್ನೊರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...