ಕಳಸ | ಜನ ವಿರೋಧಿ ಅರಣ್ಯ ಕಾನೂನುಗಳನ್ನು ರದ್ದುಪಡಿಸಬೇಕು; ರೈತ, ಕಾರ್ಮಿಕ ಹಿತ ರಕ್ಷಣಾ ಸಮಿತಿ ಪ್ರತಿಭಟನೆ

Date:

ಮಲೆನಾಡಿನ ರೈತರು ಹಾಗೂ ವಾಸಿಸುವ ಜನರಿಗೆ ಅರಣ್ಯ ಕಾನೂನುಗಳ ಕಾರಣಗಳಿಂದ ಕೃಷಿ ಜಮೀನುಗಳಿಗೆ ಹಾಗೂ ವಾಸದ ಮನೆಗಳಿಗೆ ಹಕ್ಕುಪತ್ರ ಪಡೆಯಲು ತೊಡಕಾಗಿರುತ್ತದೆ. ಸೆಕ್ಷನ್ 4 ಹಾಗೂ ಸೆಕ್ಷನ್ 17 ಮಾಡುವುದರಿಂದ ಮುಂದೆ ಸಾರ್ವಜನಿಕ ಉದ್ದೇಶಗಳಿಗೆ ಹಾಗೂ ವಸತಿ ರಹಿತರಿಗೆ ಭೂಮಿ ಅಗತ್ಯವಿರುವದರಿಂದ ಇಂತಹ ಕಾನೂನುಗಳು ಸರಕಾರಕ್ಕೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ.

Screenshot 2026 01 12 15 56 19 34 99c04817c0de5652397fc8b56c3b3817

ಜನವಿರೋಧಿ ಕಾನೂನುಗಳನ್ನು ಜಾರಿ ಮಾಡಬಾರದು ಹಾಗೆಯೇ, ಈಗಾಗಲೇ ಕೃಷಿ ಮಾಡಿರುವ ಹಾಗೂ ವಾಸ ಮಾಡುತ್ತಿರುವ ಜಮೀನು ಮತ್ತು ಮನೆಗಳಿಗೆ ಹಕ್ಕುಪತ್ರ ಕೊಡಬೇಕಾಗಿ ಪ್ರತಿಭಟನೆ ಹಾಗೂ ಧರಣಿಯ ಮೂಲಕ ಆಗ್ರಹ ಮಾಡುತ್ತಿದ್ದೇವೆಂದು ರೈತ, ಕಾರ್ಮಿಕ ಹಿತ ರಕ್ಷಣಾ ಸಮಿತಿ ವತಿಯಿಂದ ಕಳಸ ತಾಲೂಕಿನ ಕಳಶೇಶ್ವರ ದೇವಸ್ಥಾನದಿಂದ ಅರಣ್ಯ ಇಲಾಖೆ ಕಚೇರಿಯವರೆಗೂ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿದ್ದೀರಾ?ಕಳಸ | ಜನವಿರೋಧಿ ಅರಣ್ಯ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೋತ್ತಾಯಗಳು: ಈಗ ಫಹಣಿಗಳಲ್ಲಿ ಲಭ್ಯವಿರುವ ಗೋಮಾಳ ಭೂಮಿಯನ್ನು (ಕಂದಾಯ) ಮೀಸಲು ಅರಣ್ಯವಾಗಿ ಘೋಷಿಸಬಾರದು. 2) 2001-02ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಅರಣ್ಯ ಎಂದು ಘೋಷಿಸಿರುವ ಸರ್ವೆ ನಂಬರುಗಳಲ್ಲಿ ಆಗಲೇ ಕೃಷಿ ಭೂಮಿಗಳಿದ್ದು, ಇವುಗಳ ಮಂಜೂರಾತಿಗೆ ಸಮಸ್ಯೆಯಾಗಿರುವುದರಿಂದ ಮತ್ತೆ ಈ ಭೂಮಿಗಳನ್ನು ಕಂದಾಯ ಭೂಮಿಗಳನ್ನಾಗಿ ಘೋಷಿಸಬೇಕು. 3) ಫಾರಂ. ನಂ. 50, 53, 57 ಹಾಗೂ 94 ಸಿ ಅಡಿಯಲ್ಲಿ ಅರ್ಜಿ ಹಾಕಿದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕೂಡಲೇ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. 4) ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 10 ಎಕರೆ ಭೂಮಿಯನ್ನು ನಿವೇಶನಕ್ಕಾಗಿ ಮೀಸಲಿಡಬೇಕು. 5) ಫಾರಂ ನಂ. 57ರ ಮಂಜೂರಾತಿಗೆ ವಾಣಿಜ್ಯ ಬೆಳೆಗಳನ್ನು ಹೊರಗಿಟ್ಟಿರುವುದರಿಂದ ಮಲೆನಾಡಿಗರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸರಿ ಪಡಿಸಬೇಕು. 6) ಅರಣ್ಯ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಹಾಗೆ ಕೇಂದ್ರ ಸರ್ಕಾರ ಅರಣ್ಯ ಕಾಯ್ದೆಗೆ ತಿದ್ದುಪಡಿ ತರಲು ಸಂಸತ್ತಿನಲ್ಲಿ ಕಾನೂನು ರೂಪಿಸಬೇಕು. 7) ಪ್ರಕ್ರಿಯೆ ನಡೆಯುತ್ತಿದ್ದು, ಈ ಪಟ್ಟಿಯಲ್ಲಿ ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಈಗಾಗಲೇ ಬೇರೆ ಬೇರೆ ಕಾರಣಗಳಿಂದ ಕೆಲವರ ಫಹಣಿಗಳು ರದ್ದಾಗಿದ್ದು, ಅರ್ಹ ರೈತರ ಫಹಣಿಗಳನ್ನು ಪುನಃ ಚಾಲನೆಗೊಳಿಸಬೇಕು. 8) ಅರಣ್ಯ ಹಕ್ಕು ಕಾಯ್ದೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಇರುವ ಕಾಲಮಿತಿಯನ್ನು ಅರಣ್ಯ ವಾಗಿ 9) ಗ್ರಾಮಗಳ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಡಚಣೆ ಮಾಡುವುದನ್ನು ನಿಲ್ಲಿಸಬೇಕು. 10) ಗ್ರಾಮೀಣ ಭಾಗದ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಿ, ಸರ್ವಋತು ರಸ್ತೆಗಳನ್ನಾಗಿ ಮಾಡಬೇಕು. ಈಗಾಗಲೇ 94ಸಿ ಅಡಿಯಲ್ಲಿ ಅರ್ಜಿ ಹಾಕಿ ವಜಾ ಆದವುಗಳನ್ನು ಮರು ಪರಿಶೀಲಿಸಬೇಕು ಹಾಗೂ 11) ಅರಣ್ಯವೆಂಬ ನೆಪವೊಡ್ಡಿ ಯಾವುದೇ ಬಡವರ, ರೈತರ ಹಕ್ಕುಪತ್ರಗಳನ್ನು ವಜಾ ಮಾಡಬಾರದು ಹಾಗೂ ತೆರವುಗೊಳಿಸಬಾರದು.ಹಾಗೂ ಮತ್ತಷ್ಟು ಹಾಕ್ಕೋತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...