ಬೀದರ್‌ನಲ್ಲಿ ಆ.6ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

Date:

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರ್‌ ನಗರದ ಗುರುನಾನಕ್‌ ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ತಿಳಿಸಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಮಾರಂಭ ಉದ್ಘಾಟಿಸಿ ʼಪರಿಸರ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರʼ ವಿಷಯ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್‌ ಧರ್ಮಸಿಂಗ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೀದರ್‌ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಹಿರಿಯ ಪತ್ರಕರ್ತ ಎಸ್.ಕುಮಾರ್‌ ʼನ್ಯೂಸ್ ರೂಂ ನಲ್ಲಿ ಎಐ ಮತ್ತು ನಾನುʼ ಹಾಗೂ ಮೈಸೂರು ವಿವಿ ಪ್ರಾಧ್ಯಾಪಕಿ ಸಪ್ನಾ ಎಂ.ಎಸ್‌ ಅವರು ʼಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನʼ ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಸಿಕೊಡಲಿದ್ದಾರೆ.

ವಿಭಾಗ ಮಟ್ಟದ ತರಬೇತಿಯಲ್ಲಿ ನೋಂದಾಯಿಸಿಕೊಂಡಿರುವ ಅನ್ಯ ಜಿಲ್ಲೆಯಿಂದ ಆಗಮಿಸುವ ಪತ್ರಕರ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ದೂರದ ಜಿಲ್ಲೆಗಳಿಂ ಬರುವ ಪತ್ರಕರ್ತರ ಅನುಕೂಲಕ್ಕಾಗಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ನೇರವಾಗಿ ಕಾರ್ಯಕ್ರಮಕ್ಕೆ ಆಗಮಿಸುವ ಪತ್ರಕರ್ತರು ಅಂದು ಬೆಳಿಗ್ಗೆ 9:30 ಗಂಟೆಯೊಳಗಾಗಿ ಕಾರ್ಯಕ್ರಮದ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ದೂರದ ಜಿಲ್ಲೆಗಳಿಂದ ಆಗಮಿಸುವ ಪತ್ರಕರ್ತರಿಗೆ ಬೀದರ್‌ ನಗರದ ಗುರುದ್ವಾರದ ವಸತಿ ಸಂಕೀರ್ಣದಲ್ಲಿ ಆ.6ರಂದು ಬೆಳಿಗ್ಗೆ ಫ್ರೆಸ್‌ ಅಪ್ ಆಗಲು ವಸತಿ ಸೌಲಭ್ಯ ಒದಗಿಸಲಾಗುವುದು. ಅಲ್ಲಿನ ಶಿಸ್ತು, ನಿಯಮಗಳನ್ನು ಪಾಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ತರಬೇತಿ ಅಂತ್ಯದಲ್ಲಿ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಿರ್ಮಾಣವಾಗದ ಸ್ವಂತ ಕಟ್ಟಡ : ಯರನಳ್ಳಿ ಗ್ರಾಮ ಪಂಚಾಯಿತಿಗೆ ಆರೋಗ್ಯ ಕೇಂದ್ರವೇ ಆಸರೆ!

ಸಮನ್ವಯಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧೀಕ್ಷಕ ಮುನಿರಾಜು (ಮೊ. 9480331511) ಅಥವಾ ಬೀದರ್‌ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಕೃಷ್ಣ (ಮೊ.83106 47050) ಅವರನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...