ಉಡುಪಿ | ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚಿನಲ್ಲಿ ದೀಪಾವಳಿ ಸಂಭ್ರಮ

Date:

ಉಡುಪಿ ನಗರದ ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಬಾಂದವರ ಮನೆಗಳಿಗೆ ಭೇಟಿ ನೀಡಿ ಶುಭಾಶಯ ಕೋರಿ, ಸಿಹಿ ತಿಂಡಿಗಳನ್ನು ಹಂಚಲಾಯಿತು. ನೆರೆಯ ಅಂಗಡಿಗಳ ವ್ಯಾಪಾರಿಗಳಿಗೆ, ರಿಕ್ಷಾ ಚಾಲಕರಿಗೆ ಹಾಗೂ ಬಾಡಿಗೆ ವಸತಿಯಲ್ಲಿರುವ ಬಾಂದವರಿಗೆ ಸಹ ಸಿಹಿಯೊಡನೆ ಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಸಂಧ್ಯಾಕಾಲದ ಬೆಳಕಿನ ಹಾಗೂ ದೀಪಗಳ ಹಬ್ಬವನ್ನು ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಮತ್ತು ಭಾವಪೂರ್ಣವಾಗಿ ಆಚರಿಸಲಾಯಿತು.

ಕಾಥೆಡ್ರಲ್ ಧರ್ಮಗುರು ಮೊನ್ಸಿಞ್ಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ನಮಗಾಗಿ ಬೆಳಕಾಗದೆ, ನಮಗಾಗಿ ಜೀವಿಸದೆ, ಪರರಿಗೋಸ್ಕರ ಬೆಳಕಾಗಿ ಉಜ್ವಲವಾಗಿ ಜೀವಿಸಬೇಕು. ಒಗ್ಗೂಡಿ ಬಾಳಬೇಕು ಹಾಗೂ ಸಾಮರಸ್ಯದಿಂದ ಬೆಳೆಯಬೇಕು ಎಂದು ಉಪದೇಶಿಸಿದರು.

ಕಾಥೆಡ್ರಲ್ ಸಹಾಯಕ ಗುರು ರೆವ್. ಫಾ. ಪ್ರದೀಪ್ ಕಾರ್ಡೋಜರವರು ಪ್ರಾಸ್ತಾವಿಕ ಮಾತನಾಡಿ, ನಾವೆಲ್ಲರು ಅಂತರಂಗ ಹಾಗೂ ಬಹಿರಂಗ ಸಮಾನಾಂತರ ಜೀವನ ನಡೆಸಬೇಕು. ಉರಿಯುವ ದೀಪದಂತೆ, ಬೆಳಗುವ ತೂಗುದೀಪದಂತೆ, ಪ್ರಜ್ವಲಿಸುವ ಹಣತೆಯಂತೆ ನಮ್ಮ ಜೀವನವೂ ಬೆಳಗಬೇಕು. ಐಕ್ಯತೆಯ ಭಾವದಿಂದ ಜೀವಿಸೋಣ; ಭಗವಂತನ ಕೃಪೆ, ವರ ಹಾಗೂ ಸಮೃದ್ಧಿ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಪಂಚಾಯತ್ ಅಧ್ಯಕ್ಷ ಶ್ರೀ ನಾಗರಾಜ್ ಹಾಗೂ ಅಂಗಡಿ ಮಾಲಕರ ಸಂಘದ ಸಂಚಾಲಕ ಶ್ರೀ ವಿಜಯ್ ಸುವರ್ಣ ರವರು ಮಾತನಾಡಿ, ಕ್ರೈಸ್ತ ಹಾಗೂ ಹಿಂದೂ ಬಾಂದವರ ಬಾಂದವ್ಯ ಅಪ್ಪಟ ಪ್ರೀತಿಮಯ. ಬೇದಭಾವವಿಲ್ಲದೆ ಐಕ್ಯತಾ ಭಾವದಿಂದ ಹಬ್ಬವನ್ನು ಆಚರಿಸುತ್ತಿರುವುದು ಹರ್ಷದ ವಿಷಯ ಎಂದು ಹೇಳಿದರು.

ಹಬ್ಬದ ಪ್ರಯುಕ್ತ ಎಂಟು ಮಂದಿ ಸಮಾಜಸೇವಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸುಮಾರು 170 ಮಂದಿ ಕ್ರೈಸ್ತ, ಮುಸ್ಲಿಂ ಮತ್ತು ಹಿಂದೂ ಬಾಂದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪರಿಸರ ಸ್ನೇಹಿ ಪಟಾಕಿಗಳನ್ನು ಸಿಡಿಸಲಾಯಿತು. ಚರ್ಚ್ ಕಥೋಲಿಕ್ ಸಭೆಯ ಅಧ್ಯಕ್ಷೆ ಶ್ರೀಮತಿ ಮಾರ್ಸೆಲಿನ್ ಶೇರಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೆಲ್ವಿನ್ ಸಿಕ್ವೇರ, ಕಾರ್ಯದರ್ಶಿ ಎವ್ಜಿನ್ ರೆಬೆಲ್ಲೊ, 20 ಆಯೋಗಗಳ ಸಂಯೋಜಕಿ ಪ್ರೇಮ ಲುವಿಸ್ ಹಾಗೂ ಆಯೋಗದ ಸಚೇತಕ್ ಜೆಫ್ರಿ ಡಯಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...