ಕನಕಗಿರಿ | ಬಸವ, ಅಂಬೇಡ್ಕರ್ ಯೋಜನೆಯ ಮನೆ ಹಂಚಿಕೆಯಲ್ಲಿ ವಂಚನೆ: ಗ್ರಾಮಸ್ಥರ ಅಸಮಾಧಾನ

Date:

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್‌ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಕನಕಗಿರಿಯ ಸುಳೇಕಲ್ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆದ ಗ್ರಾಮಸಭೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಪಿಡಿಒ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

“ಸಭೆ ಆರಂಭಕ್ಕೂ ಮುನ್ನ ಪಿಡಿಒ ಹಾಗೂ ಸದಸ್ಯರು ಸ್ವತಃ ತಯಾರಿಸಿದ ಫಲಾನುಭವಿಗಳ ಪಟ್ಟಿಯನ್ನು ಸಭೆಯಲ್ಲಿ ಓದಿ, ʼಮನೆ ಹಂಚಿಕೆಯಲ್ಲಿ ಇದು ಅಂತಿಮ ಪಟ್ಟಿ, ಇವರೇ ಫಲಾನುಭವಿಗಳುʼ ಎಂದು ಘೋಷಿಸಿದರು. ಹಲವಾರು ಅರ್ಹ ಫಲಾನುಭವಿಗಳು ತಮ್ಮ ಹೆಸರು ಪಟ್ಟಿಯಲ್ಲಿ ಇಲ್ಲ ಎಂದು ಆಕ್ಷೇಪಿಸಿದರು. ಗ್ರಾಮಸ್ಥರು ಜನರ ಒಪ್ಪಿಗೆ ಕೇಳದೇ ಇಂತಹ ತೀರ್ಮಾನ ತೆಗೆದುಕೊಂಡಿದ್ದು ತಪ್ಪು” ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಆದರೂ ಪಟ್ಟಿಯಲ್ಲಿ ಯಾವುದೇ ತಿದ್ದುಪಡಿ ಮಾಡದೇ ಅಂತಿಮವಾಗಿ ಹೆಸರು ಘೋಷಿಸಿ ಸಭೆಯನ್ನು ಮುಕ್ತಾಯಗೊಳಿಸಿದರು. ಈ ನಡೆ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದ್ದು, ಸಂಬಂಧಿಸಿದ ಅಧಿಕಾರಿ ಮೇಲೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿವೃದ್ಧಿ ಅಧಿಕಾರಿಗಳು ಹಾಗೂ ಸದಸ್ಯರು ಹೇಳಿದಂತೆ ನೀವು ಕೇಳಬೇಕು, ನೀವು ಹೇಳಿದಂತೆ ನಾವು ಕೇಳಲಾಗುವುದಿಲ್ಲ ಎಂದು ಆಕ್ಷೇಪಿಸಿದ ಫಲಾನುಭವಿಗಳ ಮೇಲೆ ಅಧಿಕಾರದ ದರ್ಪ ತೋರಿಸಿದ್ದಾರೆ. ಈ ಬಗ್ಗೆ ಹಿಂದೆ ಎರಡು ಸಾರಿ ಮನವಿ ಸಲ್ಲಿಸಿದ್ದರೂ ಅದಕ್ಕೆ ಯಾವುದೇ ಹಿಂಬರಹ ಕೊಡದೆ, ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಯಾರು ಹತ್ತು ಸಾವಿರ ರೂಪಾಯಿ ಕೊಡ್ತಾರೊ ಅವರಿಗೆ ಮನೆ ಹಂಚಿಕೆ ಮಾಡುತ್ತಾರೆ. ಅರ್ಹ ಫಲಾನುಭವಿಗಳು ಮನೆ ಕೇಳಿದರೆ.. ಪಟ್ಟಿ ಬಿಡುಗಡೆ ಆದ ನಂತರ ನೀವು ತಕರಾರು ಅರ್ಜಿ ಕೊಡಿ ಆಮೇಲೆ ನೋಡುತ್ತೇವೆ ಎನ್ನುವ ಹಾರಿಕೆ ಉತ್ತರ ಕೊಡುತ್ತಾರೆ” ಎಂದು ಮನೆ ವಂಚಿತ ಹನುಮೇಶ ಸುಳೇಕಲ್ ಆರೋಪಿಸಿದರು.

ಇದನ್ನೂ ಓದಿ: ಕೊಪ್ಪಳ | ಪಹಲ್ಗಾಮ್‌ ಭಯೋತ್ಪಾದಕ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

“ತೋರಿಕೆಗೆ ಮಾತ್ರ ಸಭೆ ಕರೆಯಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ, ಉಪಾಧ್ಯಕ್ಷ ಶಿವಾನಂದ ವಂಕಲುಕುಂಟ ಹಾಗೂ ಪಿಡಿಒ ಹನುಮಂತಪ್ಪ ಗ್ರಾಮ ಪಂಚಾಯತಿ ಸದಸ್ಯರಾದ ಗುಂಡಮ್ಮ, ರಮೇಶ ಗಣಗರ್, ಮಾಂತೇಶ್ ದಾಸನಾಳ, ಪಂಪಾಪತಿ ದೇಸಾಯಿ ಇವರೆಲ್ಲರೂ ಸೇರಿ ಅನರ್ಹ ಫಲಾನುಭವಿಗಳಿಗೆ ಮನೆಯನ್ನು ಹಂಚಿಕೆ ಮಾಡಿರುತ್ತಾರೆ. ಇವರ ಏಕಪಕ್ಷೀಯ ನಡೆಯಿಂದ ಅರ್ಹ ಬಡ ಫಲಾನುಭವಿಗಳಿಗೆ ಅನ್ಯಾಯವಾಗಿದೆ” ಎಂದು ಹನುಮೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...