ಕನಕಪುರ | ಅನೈತಿಕ ಪೊಲೀಸ್​ಗಿರಿ: ಯುವಕ, ಯುವತಿಯ ತಲೆಬೋಳಿಸಿದ್ದ ಆರೋಪಿಗಳ ಬಂಧನ

Date:

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎರಡು ಸಮುದಾಯಗಳ ಯುವಕ-ಯುವತಿಯ ಮೇಲೆ ಹಲ್ಲೆಗೈದು, ಅವರ ತಲೆಬೋಳಿಸಿ ದೌರ್ಜನ್ಯ ಎಸಗಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಇಂದಿರಾನಗರದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವಾಜ್, ಕಬೀರ್, ಸುಯೋಲ್, ನಯಾಜ್ ಹಾಗೂ ಓರ್ವ ಮಹಿಳೆ ಬಂಧಿತರು.

ಹಿಂದು ಸಮುದಾಯದ ಮಹೇಶ್ ಮತ್ತು ಮುಸ್ಲಿಂ ಸಮುದಾಯದ ಹಸೀನಾ ಬಾನು ಎಂಬವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದು, ಇಬ್ಬರ ತಲೆ ಬೋಳಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ಇಬ್ಬರೂ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ, ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಮಹೇಶ್ ಮತ್ತು ಹಸೀನಾ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ, “ಸಂತ್ರಸ್ತರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಈ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...