ವಿಜಯಪುರ | ಅಭಿವೃದ್ಧಿ ದೃಷ್ಟಿಯಿಂದ ಕಾಂತರಾಜು ವರದಿ ಜಾರಿಯಾಗಬೇಕು: ಶೋಷಿತ ವರ್ಗಗಳ ಮುಖಂಡರಿಂದ ಸಭೆ

Date:

“ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತು ಬೇರಾವ ನಾಯಕರಿಂದಲೂ ಈ ವರದಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಹೀಗಾಗಿ ಸಿದ್ದರಾಮಯ್ಯನವರೇ ಕಾಂತರಾಜು ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅಂಗೀಕಾರ ಪಡೆಯಬೇಕು” ಎಂದು ಕಾಂಗ್ರೆಸ್‌ನ ಮಾಜಿ ಶಾಸಕರಾದ ರಾಜು ಆಲಗೂರು ಹೇಳಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಜಯಪುರ ಜಿಲ್ಲಾ ಶೋಷಿತ ವರ್ಗಗಳ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಕಾಂತರಾಜು ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ, ಅಡೆತಡೆ ಒಡ್ಡುತ್ತಿರುವ ವಿವಿಧ ಪಕ್ಷಗಳ ವೀರಶೈವ ಲಿಂಗಾಯತ ಹಾಗೂ ಒಕಲಿಗ ಸಮುದಾಯದ ಶಾಸಕರು ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಆರ್ಥಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಂತರಾಜು ವರದಿ ಜಾರಿಯಾಗಲೇಬೇಕು. ಒಂದು ವೇಳೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾನಂದ ಚೌವನ ಮಾತನಾಡಿ, ಕಾಂತರಾಜು ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ, ಅಡೆತಡೆ ಒಡ್ಡುತ್ತಿರುವ ವಿವಿಧ ಪಕ್ಷಗಳ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಶಾಸಕರು, ಸಚಿವರ ನಡೆ ಖಂಡನೀಯ. ಈ ವಿಷಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ತಟಸ್ಥವಾಗಿರಬೇಕು. ಇಲ್ಲವೇ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿಜಯಪುರ

ಶರಣಪ್ಪ ಸುಣಗಾರ ಮಾತನಾಡಿ, ಶೀಘ್ರದಲ್ಲೇ ಮುಖ್ಯಮಂತ್ರಿ ಬಳಿಗೆ ಸರ್ವ ಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗವನ್ನು ಕೊಂಡೊಯ್ಯಲಾಗುವುದು. ಜೊತೆಗೆ ವರದಿಗೆ ವಿರೋಧ ವ್ಯಕ್ತಪಡಿಸುವವರ ಮನವೊಲಿಕೆಗೂ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಎಸ್.ಎಂ.ಪಾಟಿಲ (ಗಣಿಹಾರ) ಮಾತನಾಡಿ, “ಶೈಕ್ಷಣಿಕ, ರಾಜಕೀಯ ಸೇರಿದಂತೆ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಂತರಾಜು ವರದಿ ಜಾರಿಯಾಗಲೇಬೇಕು. ಒಂದು ವೇಳೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು” ಎಂದರು.

ರಾಜ್ಯ ಸರ್ಕಾರವು ₹185 ಕೋಟಿ ಖರ್ಚು ಮಾಡಿ ವೈಜ್ಞಾನಿಕವಾಗಿ ತಯಾರಿಸಿರುವ ಕಾಂತರಾಜು ವರದಿ ಪರವಾಗಿ ರಾಜ್ಯದ ಶೇ. 70ರಷ್ಟು ಜನ ಇದ್ದಾರೆ. ಕೇವಲ ಶೇ 30ರಷ್ಟು ಇರುವ ಜನರಿಂದ ವಿರೋಧ ವ್ಯಕ್ತವಾಗುತ್ತಿರುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರೇ ಜಾತಿ ಜನಗಣತಿ ಪರವಾಗಿದ್ದಾರೆ. ಜಾತಿ ಜನ ಗಣತಿಗೆ ವಿರೋಧ ವ್ಯಕ್ತಪಡಿಸುವವರು ರಾಹುಲ್‌ ಗಾಂಧಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದಂತೆ. ಅಹಿಂದ ಮತಗಳಿಂದಲೇ ಚುನಾಯಿತರಾಗಿ ಸಚಿವ, ಶಾಸಕರಾದವರು ವಿರೋಧ ವ್ಯಕ್ತಪಡಿಸುತ್ತಿವುದು ಖಂಡನೀಯ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ತಪ್ಪು ವದಂತಿ; ಆತಂಕಪಡುವ ಅವಶ್ಯಕತೆ ಇಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಬ್ದುಲ್ ಹಮೀದ್‌ ಮುಶ್ರೀಫ್, ಬಿ.ಡಿ. ಪಾಟೀಲ, ಸೋಮನಾಥ ಕಳ್ಳಿಮನಿ, ಮಹ್ಮದ್ ರಫೀಕ ಟಪಾಲ್‌, ಜಕ್ಕಪ್ಪ ಯಡವೆ, ಬಿ.ಎಸ್. ಗಸ್ತಿ, ಮಾರುತಿ ಬಂಡಿ, ಶ್ರೀಶೈಲ ತಡಲಗಟ್ಟಿ, ಅಭಿಷೇಕ ಚಕ್ರವರ್ತಿ, ಎಂ.ಸಿ. ಮುಲ್ಲಾ, ಪ್ರಕಾಶ ಸೊನ್ನದ, ಎಂ.ಜಿ. ಯಂಕಂಚಿ, ಸಂಜು ಕಂಬಾಗಿ, ಅಶೋಕ ಛಲವಾದಿ ,ಅಡಿವೆಪ್ಪ ಸಾಲಗಲ್‌, ಮಲ್ಲು ಬಿದರಿ, ರಾಜಶೇಖರ ಯಡಹಳ್ಳಿ, ಎಂ.ಆ‌ರ್. ತಾಂಬೋಳಿ, ಗಣೇಶ ಕಬಾಡೆ, ಪ್ರಕಾಶ ನಾವಿ, ಫಯಾಜ ಕಲಾದಗಿ, ವಸಂತ ಹೊನಮೊಡೆ, ದಾನಪ್ಪ ಕಟ್ಟಿಮನಿ, ಶಿವಪುತ್ರಪ್ಪ ತಳಬಂಡಾರಿ, ಬೀರಪ್ಪ ಸಾಸನೂರ, ಕೃಷ್ಣ ಕಾಮಟೆ, ಸಾಹೇಬಗೌಡ ಬಿರಾದಾರ, ದಾದಾಪೀರ ಬಡಕಲ್, ಪರಶುರಾಮ ಹೊಸಮನಿ, ಮಹಾದೇವ ರಾವಜಿ, ದಯಾನಂದ ಲಚ್ಯಾಣ ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...