ಬೀದರ್‌ | ರೈತರಿಗೆ ಕನ್ಯಾ ಕೊಡ್ತಿಲ್ಲ ; ರೈತ ಮಕ್ಕಳಿಗೆ ಮದುವೆಯಾಗುವ ಹೆಣ್ಮಕ್ಕಳಿಗೆ 5 ಲಕ್ಷ ಪ್ರೋತ್ಸಾಹ ಧನ ನೀಡಿ

Date:

ಬೀದರ್‌ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ ತ್ವರಿತವಾಗಿ ರೈತರ ನೆರವಿಗೆ ಧಾವಿಸಿ ಕೃಷಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಗ್ರಹಿಸಿದೆ.

ಬೀದರ್‌ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್‌ ಸ್ವಾಮಿ ನೇತ್ರತ್ವದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ʼಜಿಲ್ಲೆಯ ಕೃಷಿ ಅಭಿವೃದ್ಧಿಯಾಗಬೇಕಾದರೆ ಕೃಷಿ ಆಧಾರಿತ ಕಾರ್ಖಾನೆಯಾದ ಬಿ.ಎಸ್.ಎಸ್.ಕೆ. ಕಾರ್ಖಾನೆಯನ್ನು ಮಂಡ್ಯ ಜಿಲ್ಲೆಯ ಕಾರ್ಖಾನೆಯಂತೆ ಸರಕಾರವೇ ಪುನರಾರಂಭಿಸಬೇಕು. ಜಿಲ್ಲೆಯ ರೈತರ ಕಾರ್ಮಿಕರನ್ನು ರಕ್ಷಣೆ ಮಾಡಬೇಕು. ಬಡ ರೈತರಿಗೆ ಅನ್ಯಾಯವಾಗದಂತೆ ಬರ ಪರಿಹಾರದ ಹಣ ಎಲ್ಲ ರೈತರಿಗೆ ಪಾವತಿಸಬೇಕು. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರಕಾರದ ಎಸ್‌ಡಿಆರ್‌ಎಫ್ ಪಾಲು ಕೊಡಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಂದಾಯ ಇಲಾಖೆಯಿಂದ ನಡೆಸುವ ಭೂ ಸರ್ವೆಯಲ್ಲಿ ಆಗುತ್ತಿರುವ ಮೋಸ ತಪ್ಪಿಸಬೇಕು. ಬಗರ್ ಹುಕಂ ಸಾಗುವಳಿ ಭೂಮಿಯನ್ನು ರೈತರ ಹೆಸರಿಗೆ ನೋಂದಾಯಿಸಬೇಕು. ಡಿಸಿಸಿ ಬ್ಯಾಂಕಿನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಐದು ಲಕ್ಷದವರೆಗೆ ಕೃಷಿ ಸಾಲ ನೀಡಬೇಕು. ರೈತರಿಗೆ ಕೃಷಿ ಯಂತ್ರೋಪಕರಣ, ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಾಗ್ರಿಗಳನ್ನು ಜಾತಿ ಆಧಾರಿತ ಹಂಚಿಕೆ ಮಾಡದೆ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಸೌಲಭ್ಯ ನೀಡಬೇಕುʼ ಎಂದರು.

ಕೃಷಿ ಮಾಡುವ ರೈತನಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ಆದ್ದರಿಂದ ರೈತರ ಮಕ್ಕಳಿಗೆ ಮದುವೆಯಾದ ಹೆಣ್ಣು ಮಕ್ಕಳಿಗೆ ಸರ್ಕಾರ 5 ಲಕ್ಷ ಪ್ರೋತ್ಸಾಹ ಧನ ಕೊಡಬೇಕು. ಐಟಿ ಸೆಟ್‌ಗಳಿಗೆ ಹಿಂದಿನಂತೆ ಸರ್ಕಾರವೇ ವಿದ್ಯುತ್‌ ನೀಡಬೇಕು. ಖಾಸಗಿ ವಿಮಾ ಕಂಪನಿಗಳಿಂದ ರೈತರಿಗೆ ಮೋಸ ಆಗುತ್ತಿದ್ದು, ರೈತರ ಬೆಳೆ ವಿಮೆಯನ್ನು ಸರಕಾರವೇ ಭರಿಸಬೇಕು ಸೇರಿ ಒಟ್ಟು 12 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಳೆಗೆ ಮೈಲೂರ ಸರ್ಕಾರಿ ಶಾಲೆ ಗೋಡೆ ಕುಸಿತ; ಸಚಿವ ರಹೀಂ ಖಾನ್‌ ಭೇಟಿ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಮುಖಂಡ ಕೊಂಡಿಬಾರಾವ ಪಾಂಡೆ, ರಾಜ್ಯ ಉಪಾಧ್ಯಕ್ಷ ಖಾಸೀಂ ಅಲಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಶಾಂತಮ್ಮಾ ಮೂಲಗೆ, ಭಾಲ್ಕಿ ತಾಲೂಕಾಧ್ಯಕ್ಷ ಭಾವರಾವ್‌ ಬೀರಗಿ, ಬೀದರ್‌ ತಾಲೂಕಾಧ್ಯಕ್ಷ ವಿಠಲರೆಡ್ಡಿ ಆಣದೂರು, ಬಸವಕಲ್ಯಾಣ ತಾಲೂಕಾಧ್ಯಕ್ಷ ರುದ್ರಸ್ವಾಮಿ ಸೇರಿದಂತೆ ಸಂಘದ  ಪ್ರಮುಖರಾದ ಸಂತೋಷ ಗುದಗೆ, ಖಾನ್‌ಸಾಬ್‌, ಸೋಮನಾಥ ಏಣಕೂರ, ಬಸವರಾಜ ಅಷ್ಟೂರೆ, ಗುಂಡೇರಾವ ಕುಲಕರ್ಣಿ, ಕರಬಸಪ್ಪಾ ಹುಡುಗಿ, ಶಿವಕಾಂತ ಖಂಡೆ, ನಾಗಶೆಟ್ಟಿ ಲಂಜವಾಡೆ, ಕಮಳಬಾಯಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...