ಉಡುಪಿ | ಕಾಪು ಮಜೂರು ಗ್ರಾಮ ಪಂಚಾಯತ್ ಬಜೆಟ್‌ ನಲ್ಲಿ ಐತಿಹಾಸಿಕ ನಿರ್ಧಾರ

Date:

ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್‌ ವಾರ್ಷಿಕ ಬಜೆಟ್‌ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿ, ಪಾಕಿಸ್ತಾನದ ವಿರುದ್ದ ಯುದ್ದ ನಡೆಯುವ ಸಂದರ್ಭ ಎದುರಾದಲ್ಲಿ ರಾಷ್ಟ್ರ ಮತ್ತು ಸೈನಿಕರ ಹಿತದೃಷ್ಟಿಯಿಂದ ಎಲ್ಲಾ ಸದಸ್ಯರ ಒಪ್ಪಿಗೆಯ ಮೇರೆಗೆ ರೂ.10.00 ಲಕ್ಷ ಮೊತ್ತವನ್ನು ಬಜೆಟ್‌ ನಲ್ಲಿ ಮೀಸಲಿರಿಸಿದೆ.

ಈ ಬಗ್ಗೆ ಗ್ರಾ.ಪಂ ಅಧ್ಯಕ್ಷರಾದ ಶ್ರೀ ಪ್ರಸಾದ್‌ ಶೆಟ್ಟಿ ವಳದೂರು ಹಾಗೂ ಉಪದ್ಯಾಕ್ಷರಾದ ಶ್ರೀಮತಿ ಮಂಜುಳಾ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಜೂರು ಗ್ರಾಮ ಪಂಚಾಯತ್‌ ಈ ಹಿಂದಿನಿಂದಲೂ ಉತ್ತಮ ಆಡಳಿತ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಾಯೋಜಿತ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತ ಉಗ್ರರ ಅಡಗುತಾಣಗಳನ್ನು ದ್ವಂಸ ಮಾಡುತ್ತಿರುವುದು ಹೆಮ್ಮಯ ಸಂಗತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ-ಪಾಕಿಸ್ತಾನ ನಡುವೆ ಯುದ್ದದ ವಾತವರಣ ನಿರ್ಮಾಣ ವಾಗಿದ್ದು, ಒಂದು ವೇಳೆ ಯುದ್ದ ನಡೆದರೆ ಭಾರತೀಯ ಸೈನ್ಯಕ್ಕೆ ಎಲ್ಲಾ ರೀತಿಯ ನೆರವು ನೀಡುವುದು ಗ್ರಾಮ ಪಂಚಾಯತ್‌ ಕರ್ತವ್ಯವಾಗಿದೆ.ಈ ಬಗ್ಗೆ ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ ಯವರ ಜೊತೆ ಚರ್ಚಿಸಿದಾಗ ದೇಶಕ್ಕೆ ಆಪತ್ತು ಎದುರಾದಗ ಪ್ರತಿಯೊಬ್ಬ ನಾಗರೀಕನು ಸೈನ್ಯದ ಜೊತೆ ಕೈಜೋಡಿಸಬೇಕು ಮಜೂರು ಗ್ರಾಮ ಪಂಚಾಯತ್‌ ತೆಗೆದುಕೊಂಡ ನಿರ್ಧಾರ ದೇಶದಲ್ಲೆ ಪ್ರಥಮ ಮತ್ತು ಐತಿಹಾಸಿಕ ನಿರ್ಣಯವಾಗಿದೆ. ಇದು ಇತರ ಪಂಚಾಯತ್‌ ಗಳಿಗೂ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...