ಉಡುಪಿ | ಅ-2 ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ: ಹವಾಮಾನ ಇಲಾಖೆ

Date:

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

ತುರ್ತು ಸೇವೆಗೆ ಶುಲ್ಕ ರಹಿತ 1077, ದೂ.ಸಂಖ್ಯೆ: 0820-2574802, ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ :0820-2520417, ಕುಂದಾಪುರ : 08254-230357, ಕಾಪು : 0820-2551444, ಬ್ರಹ್ಮಾವರ : 0820-2560494 ಹಾಗೂ ಬೈಂದೂರು : 08254-251657 ಮತ್ತು ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2593366 ಅಥವಾ 0820-2520306 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...