ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

Date:

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದ್ದಾರೆ.

ತಾಲೂಕಿನ ಕೊನಹಳ್ಳಿ ಗ್ರಾಮದಿಂದ ಕಂದಳ್ಳಿ ಗ್ರಾಮದ ಭೀಮಾ ಬ್ರಿಡ್ಜ್‌ವರೆಗೆ ಅಂದಾಜು 4 ಕಿಲೋ ಮೀಟರ್ ಮತ್ತು ತುಮಕೂರಿನಿಂದ ವಡಗೇರಾ ಮತ್ತು ಮಾಚನೂರಿನಿಂದ ಬೆಂಡೆಬೆಂಬಳಿ ವಡಗೇರಾ ಕ್ರಾಸ್ ಬಳಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಾಣ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಆಗ್ರಹಿಸಿದ್ದಾರೆ.

“ಈ ರಸ್ತೆಗಳಲ್ಲಿ ಸಂಚರಿಸುವಾಗ ಅತಿ ಹೆಚ್ಚಿನ ಅಪಘಾತಗಳಾಗಿದ್ದು, ಸಾವು ನೋವುಗಳಾದ ಉದಾಹರಣೆಗಳಿವೆ. ಹಲವು ತಾಲೂಕು ಕೇಂದ್ರದಿಂದ ಸೈದಾಪುರ, ರಾಯಚೂರು ಹಾಗೂ ತೆಲಂಗಾಣ ಗಡಿಭಾಗ ಸೇರಿದಂತೆ ಇತರ ಗ್ರಾಮಗಳಿಗೆ ತೆರಳಲು ವಾಹನ ಸವಾರರು ತಮ್ಮ ಸಂಚಾರಕ್ಕೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರಸ್ತೆಗಳು ಮಳೆಗಾಲದಲ್ಲಂತೂ ನೀರು ತುಂಬಿಕೊಂಡು ಕೆರೆಯಂತಾಗುತ್ತವೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಮುಂದಾಗಬೇಕು. ಒಂದು ವೇಳೆ ವಿಳಂಬ ಮಾಡಿದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ತೀವ್ರ ಹೊರಾಟ ಮಾಡಬೇಕಾಗುತ್ತದೆ” ಎಂದು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ, ಕರವೇ ಮುಖಂಡರಾದ ಸಿದ್ದು ಪೂಜಾರಿ, ಮಲ್ಲು ಜಡಿ, ಬಸಯ್ಯಸ್ವಾಮಿ ಊಳ್ಳೆಸೂಗೂರು, ಪೀರ್ ಸಾಬ್ ಮರಡಿ, ಶ್ರೀನಿವಾಸ್, ಮಡಿವಾಳ್, ಎಸ್ ಜಡಿ, ಬಸವರಾಜ್ ಕೂದ್ದಡ್ಡಿ, ಶರಣು ಅಂಗಡಿ, ಜಾಫರ್ ತುಮಕೂರ್, ಸುರೇಶ್ ಬಾಡದ, ಮಹಮ್ಮದ್ ಕತಾಲಿ, ಮಾಳಪ್ಪ ಹೈಯಾಳ, ಜುಬಲಪ್ಪ ಕಟ್ಟಿಮನಿ, ಹಣಮಂತ ಓಡಾಕರ, ನಿಂಗು ಮುನಮುಟಗಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...