ಉಡುಪಿ : ಕಾರ್ಕಳದಲ್ಲಿ ಹಿಟ್ ಆಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

Date:

ಉಡುಪಿ‌ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ನಿನ್ನೆ ರಾತ್ರಿ ಅಪರಿಚಿತ ಘನ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳದ ಹಿರಿಯಂಗಡಿ ನಿವಾಸಿ ಕೂಲಿ ಕಾರ್ಮಿಕ ಹರೀಶ್ ಪೂಜಾರಿ (63) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಹರೀಶ್ ಪೂಜಾರಿ ತಮ್ಮ ದೈನಂದಿನ ಕೆಲಸ ಮುಗಿಸಿ ಮನೆಯ ಕಡೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಪರಿಚಿತ ಘನ ವಾಹನವು ಹಿಂದಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ. ಹರೀಶ್ ಪೂಜಾರಿ ಅವರ ದೇಹದ ಮೇಲೆಯೇ ವಾಹನದ ಚಕ್ರ ಚಲಿಸಿದ ಪರಿಣಾಮ ದೇಹವು ಸಂಪೂರ್ಣ ಛಿದ್ರವಾಗಿದೆ.

ಕಾರ್ಕಳ ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾದ ವಾಹನದ ಶೋಧ ಕಾರ್ಯ ನಡೆಯುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...