ಉಡುಪಿ | ಅಪಘಾತಕ್ಕೆ ಆಹ್ವಾನಿಸುತ್ತಿದೆ ಕುಂಟಲ್ಟಾಡಿ ಜಂಕ್ಷನ್

Date:

ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ಬೈಪಾಸ್ ರಾಜ್ಯ ಹೆದ್ದಾರಿ ಕುಂಟಲ್ಪಾಡಿ ಜಂಕ್ಷನ್‌ ಅಪಘಾತ ವಲಯವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ. ಈ ಬಗ್ಗೆ ಹೆದ್ದಾರಿ ಇಲಾಖೆ ಸುರಕ್ಷಾ ಕ್ರಮಗಳನ್ನು ರೂಪಿಸುವಂತೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಸಾಣೂರು, ಸಾಣೂರು ಜಂಕ್ಷನ್, ಕುಂಟಲ್ಪಾಡಿ, ಬಿಂದು ನಗರ, ಮಠದಕೆರೆ, ದೂಪದಕಟ್ಟೆ, ಪರ್ಪಲೆ, ದೆಂದಬೆಟ್ಟು, ಜೋಡು ಗರೋಡಿ, ಕಡೆಬೆಟ್ಟು, ಮಠದ ಬೈಲು ಭಾಗದ ಜನರಿಗೆ ಜಂಕ್ಷನ್ ನಿತ್ಯ ಓಡಾಟದ ಸ್ಥಳವಾಗಿದೆ. ಈ ರಾಜ್ಯ ಹೆದ್ದಾರಿಯಲ್ಲಿ ಕಾರು, ಬೈಕು, ಬಸ್ಸು ಸಹಿತ ಲಘು, ಘನ ವಾಹನಗಳು ನೂರಾರು ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತವೆ. 10 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿಯಾಗಿ ವ್ಯವಸ್ಥಿತವಾಗಿ ರೂಪುಗೊಂಡ ರಸ್ತೆಯು ಕುಂಟಲ್ಪಾಡಿಯಲ್ಲಿ ಮಾತ್ರ ಅವೈಜ್ಞಾನಿಕ ಮಾದರಿಯಲ್ಲಿ ರೂಪುಗೊಂಡಿದೆ ಎಂದು ಸ್ಥಳೀಯರ ಅಭಿಪ್ರಾಯ. ಈಗಾಗಲೆ ಹಲವು ಅಪಘಾತಗಳು ಇಲ್ಲಿ ಸಂಭವಿಸಿದ್ದು, ಒಂದೆಡೇ ರಸ್ತೆ ಅವೈಜ್ಞಾನಿಕತೆ ಮತ್ತು ಚಾಲಕರ ಅತೀ ವೇಗದ ಚಾಲನೆಯೂ ಅಪಘಾತಗಳಿಗೆ ಕಾರಣ ಎನ್ನಲಾಗುತ್ತದೆ.

ಇಲ್ಲಿ ಕೈಗಾರಿಕೆ ಪ್ರದೇಶಗಳು ಇದ್ದು, ಹೆಚ್ಚಿನ ಸಂಖ್ಯೆ ಘನ ವಾಹನಗಳ ಓಡಾಟವು ಇದೆ. ವಿದ್ಯಾರ್ಥಿಗಳು, ಹಿರಿಯರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಓಡಾಡುತ್ತಾರೆ. ಇಲ್ಲಿ ರಸ್ತೆ ಇಳಿಜಾರಿನಂತೆ ರೂಪಿಸಲಾಗಿದೆ. ಅಲ್ಲದೆ ತಿರುವು ಮತ್ತು ಜಂಕ್ಷನ್ ಇರುವುದರಿಂದ ಸವಾರರಿಗೆ ಗೊಂದಲ ಉಂಟಾಗುತ್ತದೆ. ಹೆದ್ದಾರಿಯಲ್ಲಿ ಬರುವ ವಾಹನಗಳು ಅತೀವೇಗದಿಂದ ಬರುತ್ತಾರೆ. ಅತೀವೇಗದಿಂದ ಬರುವ ವಾಹನಗಳು ಸ್ಥಳೀಯ ಸ್ಕೂಟರ್ ಅಥವಾ ಬೈಕ್‌ ಸವಾರರಿಗೆ ಢಿಕ್ಕಿ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ರಾಜ್ಯ ಹೆದ್ದಾರಿ ಇಲಾಖೆ ಈ ಬಗ್ಗೆ ಗಮನಹರಿಸಿ ಸುರಕ್ಷತಾ ಫಲಕ, ರಿಪ್ಲೆಕ್ಟ್ ಲೈಟ್, ಸಮರ್ಪಕ ಬ್ಯಾರಿಕೇಡ್ ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸ್ಥಳೀಯರರಾದ ಸತೀಶ್. ಎಸ್. ಬಂಗೇರ, ಮಠದಕೆರೆ ಮಾತನಾಡಿದ್ದು, ಪಡುಬಿದ್ರಿ-ಕಾರ್ಕಳ ಬೈಪಾಸ್ ರಾಜ್ಯ ಹೆದ್ದಾರಿ ರಸ್ತೆ ಉತ್ತಮವಾಗಿದ್ದು, ಕುಂಟಲ್ಪಾಡಿ ಜಂಕ್ಷನ್‌ನಲ್ಲಿ ಮಾತ್ರ ಅವೈಜ್ಞಾನಿಕ ರೀತಿಯಲ್ಲಿ ರೂಪಿಸಲಾಗಿದೆ.

ಇಳಿಜಾರಿನಂತಿರುವ ಹೆದ್ದಾರಿಯಲ್ಲಿ ವೇಗದಿಂದ ಚಲಿಸುವ ವಾಹನಗಳು ಸ್ಥಳೀಯರಿಗೆ ಆತಂಕ ಹುಟ್ಟಿಸುತ್ತದೆ. ಈಗಾಗಲೇ ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಸಾರ್ವಜನಿಕರ ಸುರಕ್ಷತೆಗಾಗಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...