ಉಡುಪಿ | ಕುಂಭಮೇಳಕ್ಕೆ ತೆರಳಿದ್ದ ಕಾರ್ಕಳದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ, ಸೂಚನೆ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬುವವರು ಕಳೆದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಈ ವರೆಗೂ ಮನೆಗೂ ಹಿಂತುರುಗದೆ ನಾಪತ್ತೆಯಾಗ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಜನವರಿ 27 ರ ನಂತರ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆ ಆದ ಬಗ್ಗೆ ವರದಿಯಾಗಿದೆ.

ನಾಪತ್ತೆಯಾದ ವ್ಯಕ್ತಿಯು 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, ಮೊ.ನಂ: 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...