ಉಡುಪಿ | ಪರಸ್ಪರ ಆರೋಪಗಳ ಮಧ್ಯೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾರದ ಕಾರ್ಕಳ ಶಾಸಕ ಸುನೀಲ್ ಕುಮಾರ್

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್, ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಬೇಕಿದ್ದ ಕನಸಿನ ಯೋಜನೆ. ಆದರೆ ಇಂದು ಅದು ಕಳ್ಳತನ, ರಾಜಕೀಯ ಆರೋಪ ಪ್ರತ್ಯಾರೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ಧಾರ್ಮಿಕ ನಂಬಿಕೆಯ ಮೇಲಿನ ದಾಳಿಯ ಸಂಕೇತವಾಗಿ ಪರಿಣಮಿಸಿದೆ. ಇತ್ತೀಚೆಗೆ ನಡೆದ ತಾಮ್ರದ ಮೇಲ್ಛಾವಣಿ ಕಳ್ಳತನ ಪ್ರಕರಣ ಈ ಯೋಜನೆಯನ್ನು ಸುತ್ತಿಕೊಂಡಿರುವ ಅನೇಕ ಗಂಭೀರ ಪ್ರಶ್ನೆಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ. ಪರಶುರಾಮ ಥೀಮ್ ಪಾರ್ಕ್ ಕಾರ್ಕಳದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿದೆ ಎಂಬ ನಿರೀಕ್ಷೆ ಇದ್ದು, ವಿದ್ಯಾರ್ಥಿಗಳು, ಪ್ರವಾಸಿಗರು ನಿರಂತರವಾಗಿ ಭೇಟಿ ನೀಡುವ ತಾಣವಾಗಬೇಕಿತ್ತು. ಆದರೆ ರಾಜಕೀಯ ಸಂಘರ್ಷ, ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ಭದ್ರತಾ ಲೋಪಗಳು ಈ ಯೋಜನೆಯನ್ನು ಸಂಕಷ್ಟಕ್ಕೆ ತಳ್ಳಿವೆ.

1009118543

ಪರಶುರಾಮ ಮೂರ್ತಿ ಪ್ರತಿಷ್ಠಾಪನೆಯ ದಿನದಿಂದಲೇ ಪ್ರತಿಮೆಯ ಶುದ್ಧತೆ, ನಿರ್ಮಾಣ ಗುಣಮಟ್ಟ ಮತ್ತು ಭದ್ರತೆ ಕುರಿತು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿದ್ದವು. ಕಾರ್ಕಳ ಸಮಾನ ಮನಸ್ಕ ತಂಡದ ದಿವ್ಯಾ ನಾಯಕ್ ನೇತೃತ್ವದಲ್ಲಿ 14 ಮಂದಿ ಉಪವಾಸ ಸತ್ಯಾಗ್ರಹ ನಡೆಸಿ, ಥೀಮ್ ಪಾರ್ಕ್ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನಿಯೋಜನೆ ಹಾಗೂ ಪ್ರತಿಮೆಯ ಗುಣಮಟ್ಟ ಪರಿಶೀಲನೆಗೆ ಆಗ್ರಹಿಸಿದ್ದರು. ಆದರೆ ಆ ಸಂದರ್ಭದಲ್ಲಿ ಸ್ಥಳೀಯ ಶಾಸಕ ವಿ. ಸುನೀಲ್ ಕುಮಾರ್ ಮೌನ ವಹಿಸಿದ್ದರು ಎಂಬ ಆರೋಪ ಈಗ ಮತ್ತಷ್ಟು ತೀವ್ರವಾಗಿದೆ.

1009118534 1

ಇತ್ತೀಚೆಗೆ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನದ ಕುರಿತು ಮಾತನಾಡಿದ್ದ ಶಾಸಕ ವಿ. ಸುನೀಲ್ ಕುಮಾರ್, ಇದಕ್ಕೆ ಕಾಂಗ್ರೆಸ್ ನಾಯಕರ ದ್ವೇಷ ರಾಜಕಾರಣವೇ ಕಾರಣ ಎಂದು ಆರೋಪಿಸಿದ್ದರು. “ಕಳೆದ ಎರಡು ವರ್ಷಗಳಿಂದ ಈ ಯೋಜನೆಗೆ ಅನುದಾನ ಬಿಡುಗಡೆ ಆಗದಂತೆ ಮಾಡಿ, ಪರಶುರಾಮ ಥೀಮ್ ಪಾರ್ಕ್ ಪಾಳು ಬೀಳುವಂತೆ ಮಾಡಲಾಗಿದೆ. ಪ್ರವಾಸಿಗರು ಬರುವ ತಾಣ ಇಂದು ಕಳ್ಳರು ನುಗ್ಗುವ ಸ್ಥಿತಿಗೆ ತಲುಪಿದೆ. ಇದು ಸ್ಥಳೀಯ ಕಾಂಗ್ರೆಸ್ ನಾಯಕರ ಅಸೂಯೆ ಹಾಗೂ ದ್ವೇಷ ರಾಜಕಾರಣದ ಫಲ” ಎಂದು ಅವರು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009118539 1

ಕಳೆದ ವಾರ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸಿದ ಬಳಿಕ, ಮತ್ತೆ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಶಾಸಕ ಸುನೀಲ್ ಕುಮಾರ್, “ಪರಶುರಾಮ ಥೀಮ್ ಪಾರ್ಕ್‌ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್‌ನ ಬ್ರದರ್ಸ್‌” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು. “ಹಿಂದು ಶ್ರದ್ಧಾ ಕೇಂದ್ರಗಳನ್ನು ಘಜ್ನಿ–ಘೋರಿಗಳು ಧ್ವಂಸ ಮಾಡಿದ ರೀತಿಯೇ ಇದು. ಕರಾವಳಿಯನ್ನು ‘ಪರಶುರಾಮ ಸೃಷ್ಟಿ’ ಎಂದು ಕರೆಯುವ ಪ್ರದೇಶದಲ್ಲೇ ಪರಶುರಾಮನ ಹೆಜ್ಜೆಗುರುತು ಇರಬಾರದು ಎಂಬ ಮನೋಭಾವದಿಂದಲೇ ಈ ಯೋಜನೆಯನ್ನು ಅರ್ಧಕ್ಕೆ ನಿಲ್ಲಿಸಲಾಯಿತು” ಎಂದು ಆರೋಪಿಸಿದ್ದರು.

ಆದರೆ ಈ ಹೇಳಿಕೆಗಳ ಮಧ್ಯೆ ಒಂದು ಪ್ರಶ್ನೆ ಗಂಭೀರವಾಗಿ ಎದುರಾಗುತ್ತದೆ: ಯೋಜನೆಯ ಸಂಪೂರ್ಣ ಮೇಲ್ವಿಚಾರಣೆ ನಡೆಸಬೇಕಿದ್ದ ಶಾಸಕರು, ಭದ್ರತೆ ಮತ್ತು ಸಿಸಿ ಕ್ಯಾಮೆರಾ ಅಳವಡಿಕೆ ಬಗ್ಗೆ ಮೊದಲೇ ಕ್ರಮ ಕೈಗೊಳ್ಳದಿರುವುದು ಯಾರ ಹೊಣೆ?

1009118537

ಶಾಸಕರ ಆರೋಪಗಳಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಗಂಭೀರ ಆರೋಪಗಳನ್ನು ಮಾಡಿದ್ದರು. “ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನವು ಶಾಸಕ ಸುನೀಲ್ ಕುಮಾರ್ ಅವರ ಪಿತೂರಿಯಿಂದಲೇ ನಡೆದಿದೆ. ರಸ್ತೆಗೇ ಕಾಣುವ ತಾಮ್ರದ ಸೀಟುಗಳನ್ನು ಮಾತ್ರ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ. ಒಳಗೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳಿದ್ದರೂ ಅವುಗಳಿಗೆ ಕೈಹಾಕಿಲ್ಲ. ಇದು ಸಹಜ ಕಳ್ಳತನವಲ್ಲ” ಎಂದು ಅವರು ಆರೋಪಿಸಿದ್ದರು.

ಇದಲ್ಲದೆ, “ಭದ್ರತೆ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆಗೆ ಈ ಹಿಂದೆಯೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಅದನ್ನು ನಿರ್ಲಕ್ಷ್ಯ ಮಾಡಲಾಯಿತು. ಕಳ್ಳತನದ ಬಗ್ಗೆ ಪೊಲೀಸರಿಗೆ ಮೊದಲು ದೂರು ನೀಡದೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಶಾಸಕರ ನಡೆ ಸಂಶಯ ಹುಟ್ಟಿಸುತ್ತದೆ” ಎಂದು ಪ್ರಶ್ನಿಸಿದ್ದರು.

ಇತ್ತೀಚಿನ ಕಳ್ಳತನ ಪ್ರಕರಣದ ದೂರನ್ನು ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಅರುಣ್‌ಕುಮಾರ್ ದಾಖಲಿಸಿರುವುದೂ ವಿವಾದಕ್ಕೆ ಕಾರಣವಾಗಿದೆ. ಪರಶುರಾಮ ಥೀಮ್ ಪಾರ್ಕ್ ಪ್ರತಿಮೆ ದರೋಡೆ ಪ್ರಕರಣದಲ್ಲಿ ಐಪಿಸಿ 420, 409, 120(ಬಿ), 34 ಸೆಕ್ಷನ್‌ಗಳ ಅಡಿಯಲ್ಲಿ ಆರೋಪಪಟ್ಟಿಯಲ್ಲಿ ಹೆಸರು ಹೊಂದಿದ್ದ ಇವರ ಅಮಾನತನ್ನು ತನಿಖೆ ಪೂರ್ಣಗೊಳ್ಳುವ ಮುನ್ನವೇ ರದ್ದುಪಡಿಸಿರುವುದಕ್ಕೆ ಉದಯಕುಮಾರ್ ಮುನಿಯಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಆರೋಪಪಟ್ಟಿಯಲ್ಲಿರುವ ವ್ಯಕ್ತಿಯೇ ದೂರುದಾರನಾಗಿರುವಾಗ ತನಿಖೆ ಪಾರದರ್ಶಕವಾಗಿರಬಹುದೇ? ಅಮಾನತು ರದ್ದುಪಡಿಸಿದ ಆಧಾರವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

1009118542

ಕಳ್ಳತನದ ಬಳಿಕ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸಿಸಿ ಕ್ಯಾಮೆರಾ ಅಳವಡಿಕೆ, 24×7 ಕಾವಲುಗಾರರ ನಿಯೋಜನೆ ಮತ್ತು ನಿರ್ವಹಣೆಗೆ ಸೂಚನೆ ನೀಡಿದ್ದಾರೆ. ಆದರೆ ಈ ಕ್ರಮಗಳು ಮೊದಲೇ ಜಾರಿಗೆ ಬಂದಿದ್ದರೆ ಈ ಘಟನೆ ತಪ್ಪಿಸಬಹುದಿತ್ತೇ ಎಂಬ ಪ್ರಶ್ನೆ ಸಾರ್ವಜನಿಕರ ವಲಯದಲ್ಲಿ ಕೇಳಿಬರುತ್ತಿದೆ.

“ರಾಜಕೀಯ ಪಕ್ಷಗಳಿಗೆ ಇದು ಚುನಾವಣಾ ರಾಜಕೀಯವಾಗಿರಬಹುದು. ಆದರೆ ಪ್ರತಿಯೊಬ್ಬ ಹಿಂದೂವಿಗೆ ಇದು ಧಾರ್ಮಿಕ ನಂಬಿಕೆಯ ಪ್ರಶ್ನೆ” ಎಂದು ದಿವ್ಯಾ ನಾಯಕ್ ಹೇಳಿದ್ದಾರೆ. ತನಿಖೆ ವಿಳಂಬವಾದರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

1009119839

ಶಾಸಕ ವಿ. ಸುನೀಲ್ ಕುಮಾರ್ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಾರೆ. ಕಾಂಗ್ರೆಸ್ ನಾಯಕರು ಇದನ್ನು ಶಾಸಕರ ಪಿತೂರಿ ಎನ್ನುತ್ತಾರೆ. ಆದರೆ ಈ ಪರಸ್ಪರ ಆರೋಪಗಳ ನಡುವೆ ಮರೆಮಾಚಲಾಗದ ಸತ್ಯ ಒಂದೇ, ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಆರಂಭದಿಂದಲೇ ಸಂಪೂರ್ಣ ರಾಜಕೀಯ ಮತ್ತು ಆಡಳಿತಾತ್ಮಕ ಹೊಣೆ ಹೊತ್ತಿದ್ದ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರು ನೈತಿಕ ಹಾಗೂ ರಾಜಕೀಯ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

1009118541

ಕಳ್ಳತನ ಪ್ರಕರಣ ಇದೀಗ ಕೇವಲ ಅಪರಾಧ ಪ್ರಕರಣವಾಗಿಯೇ ಉಳಿದಿಲ್ಲ. ಇದು ರಾಜಕೀಯ ದ್ವೇಷ, ಆಡಳಿತ ವೈಫಲ್ಯ ಮತ್ತು ಧಾರ್ಮಿಕ–ಸಾಂಸ್ಕೃತಿಕ ಭಾವನೆಗಳ ನಡುವಿನ ಸಂಘರ್ಷದ ಪ್ರತಿಬಿಂಬವಾಗಿದ್ದು, ಅಂತಿಮವಾಗಿ ನಷ್ಟ ಅನುಭವಿಸುವವರು ಸಾರ್ವಜನಿಕರು ಮತ್ತು ಕಾರ್ಕಳದ ಪ್ರವಾಸೋದ್ಯಮವೇ ಆಗಿದೆ. ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ರಾಜಕೀಯ ಆರೋಪ–ಪ್ರತ್ಯಾರೋಪಗಳಿಗಿಂತ, ಜವಾಬ್ದಾರಿಯುತ ನಿರ್ವಹಣೆ ಮತ್ತು ಭದ್ರತೆ ಬೇಕಾದದ್ದು ಎಂಬುದು ಈಗ ಸ್ಪಷ್ಟವಾಗಿ ಕಾಣಿಸುತ್ತಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...