ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಮತ್ತೆ ಇಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 5ಕ್ಕೆ

Date:

ಉಡುಪಿ ಜಿಲ್ಲೆಯ ಕಾರ್ಕಳದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು, ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಆ.28ರಂದು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಬಂಧಿತರ ವಿವರಗಳನ್ನು ಪೊಲೀಸರು ಈವರೆಗೆ ನೀಡಿಲ್ಲ. ಆದರೆ, ಇದರಲ್ಲಿ ಓರ್ವ ಶಿರ್ವ ಹಾಗೂ ಮತ್ತೋರ್ವ ಬೆಂಗಳೂರು ಮೂಲದವನು ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳ ಪೈಕಿ, ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ರಿಚರ್ಡ್ ಕ್ಷೇವಿಯರ್‌ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಅ.27ಕ್ಕೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರಿಬ್ಬರನ್ನು ಹೆಚ್ಚಿನ ತನಿಖೆ ಒಳಪಡಿಸಬೇಕಾಗಿರುವುದರಿಂದ ಮತ್ತೆ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈ ಇಬ್ಬರು ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

ಪ್ರಕರಣದ ಸಂತ್ರಸ್ತೆಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಬುಧವಾರ ಪೊಲೀಸರು ಹಾಜರುಪಡಿಸಿದ್ದು, ಆಕೆ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲ್ ಮಾಡಲಾಗಿದ್ದು, ಇದೀಗ ಆ ಹೇಳಿಕೆ ಪೊಲೀಸರ ಕೈ ಸೇರಿದೆ ಎಂದು ತಿಳಿದು ಬಂದಿದೆ. ಜಾರ್ಜ್‌ ಶೀಟ್ ಸಲ್ಲಿಕೆ ಸಮಯದಲ್ಲಿ ಈ ಲಕೋಟೆ ಸೀಲ್‌ನ್ನು ತನಿಖಾಧಿಕಾರಿಗಳು ತೆರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...