ಉಡುಪಿ | ಅನುಮತಿ ಪಡೆಯದೆ ಯಕ್ಷಗಾನದಲ್ಲಿ ಮೈಕ್ ಬಳಕೆ, ಪೊಲೀಸರಿಂದ ತಡೆ – ಅಭಿಮಾನಿಗಳ ಆಕ್ರೋಶ

Date:

ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ.

ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆಗೊಂಡಿತ್ತು. ಇಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಸಾರ್ವಜನಿಕರಿಂದ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಧ್ವನಿವರ್ದಕ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಜೆಕಾರು ಉಪನಿರೀಕ್ಷಕ ಶುಭಕರ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಇಲ್ಲಿಗೆ ಆಗಮಿಸಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಆಯೋಜಕರನ್ನು ಅರೆಸ್ಟ್ ಮಾಡಲು ಮುಂದಾಗಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳದಿಂದ ಪೊಲೀಸರು ತೆರಳಿದ್ದಾರೆ. ಇದೀಗ ಯಕ್ಷಗಾನ ಆಯೋಜಕರ ವಿರುದ್ಧ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 02/2025 ಕಲಂ: 112, 292 BNS ಮತ್ತು 37 ಕೆ.ಪಿ ಆಕ್ಟ್ ರಂತೆ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು ಕರಾವಳಿ ಭಾಗದಲ್ಲಿ ಗಂಡು ಕಲೆ ಎಂದು ಪ್ರಸಿದ್ದಿಗೊಂಡಿರುವ ಯಕ್ಷಗಾನಕ್ಕೆ ಈ ರೀತಿ ಅವಮಾನ ಆದರೆ ಮುಂದಿನ ಸ್ಥಿತಿಗತಿಗಳನ್ನು ಎಣಿಸುವಾಗ ಚಿಂತಾಜನಕವಾಗಿ ಕಾಣುತ್ತಿದೆ. ಅಧಿಕಾರಿಗಳ ಈ ವರ್ತನೆ ಯಾರನ್ನು ಓಲೈಕೆ ಮಾಡಲಿಕ್ಕಾಗಿ ? ನಿಮಗೆ ತುಳುನಾಡಿನ ಸಂಸ್ಕೃತಿ, ಕಲೆಗಳ ಬಗ್ಗೆ ಗೌರವ ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು ಹೋಗಿ, ಅದನ್ನು ಬಿಟ್ಟು ಇಲ್ಲಿ ನಡೆಯುವ ಕಲೆಗಳಿಗೆ, ಅದನ್ನು ಪೂಜಿಸುವ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಬೇಡಿ.

ಓಲೈಕೆಯ ಅಧಿಕಾರ ಹೆಚ್ಚು ದಿನ ಶಾಶ್ವತವಾಗಿ ಉಳಿಯುವುದಿಲ್ಲ, ನಮ್ಮ ತುಳುನಾಡಿನ ಕಲೆಗಳಿಗೆ ತುಳುನಾಡಿನಲ್ಲಿ ಯಾವುದೇ ಅನುಮತಿಗಳ ಅಗತ್ಯವಿಲ್ಲ. ಯಾಕೆಂದರೆ ನಾವು ಬೆಳೆದಿರುವುದು ಅದರ ಮಧ್ಯದಲ್ಲಿ. ಅದು ನಮ್ಮ ಉಸಿರು, ಅದು ನಮ್ಮ ಜೀವನಾಡಿ. ಈ ಯಕ್ಷಗಾನ ಕಲಾವಿದರಿಗೆ ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಿದ್ದೀರಿ.

ನಿಮ್ಮಂತಹ ಸಂವಿಧಾನವನ್ನು ಕಲಿತವರು ಹೀಗೆ ಮಾಡಿದಲ್ಲಿ ಸಮಾಜಕ್ಕೆ ಕಾನೂನಿನ ಪಾಠ ಯಾರು ಮಾಡುವುದು? ಇದು ಹೀಗೇ ಮುಂದುವರೆದಲ್ಲಿ ನಿಮ್ಮ ಠಾಣೆ ಎದುರಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...