ಕಡಲ ನಗರ ಮಂಗಳೂರಿಗೆ ತಟ್ಟದ ‘ಕರ್ನಾಟಕ ಬಂದ್‌’ ಬಿಸಿ; ಬಸ್ ಸಂಚಾರ, ಜನಜೀವನ ಯಥಾಸ್ಥಿತಿ

Date:

ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದ ಕಡಲ ನಗರ ಮಂಗಳೂರಿಗೆ ‘ಕರ್ನಾಟಕ ಬಂದ್‌’ ಬಿಸಿ ತಟ್ಟಿಲ್ಲ. ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಬಸ್ ಸಂಚಾರ ಪ್ರತಿದಿನದಂತೆ ಯಥಾಸ್ಥಿತಿಯಲ್ಲಿದೆ.

ಕರ್ನಾಟಕ ಬಂದ್‌ಗೆ ದ.ಕ.ಜಿಲ್ಲೆಯಲ್ಲಿ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ. ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್, ಎಕ್ಸ್‌ಪ್ರೆಸ್ ಬಸ್‌ ಸೇರಿದಂತೆ ಕೆಎಸ್‌ಆರ್‌ಟಿಸಿ ಕೂಡ ಎಂದಿನಂತೆ ಸಂಚಾರದಲ್ಲಿ ನಿರತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಹೊಟೇಲ್, ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ವ್ಯಾಪಾರ-ವಹಿವಾಟುಗಳು ಏನೂ ತೊಂದರೆ ಇಲ್ಲದೆ ಸಾಂಗವಾಗಿ ನಡೆಯುತ್ತಿದೆ.

‘ನೈತಿಕ ಬೆಂಬಲವಷ್ಟೇ’ ಎಂದ ದ.ಕ. ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ

ಶನಿವಾರ ಕನ್ನಡಪರ ಸಂಘಟನೆಗಳಿಂದ ‘ಕರ್ನಾಟಕ ಬಂದ್’ ಗೆ ಕರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಆಝೀಝ್ ಪರ್ತಿಪ್ಪಾಡಿ, ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ‘ನೈತಿಕ ಬೆಂಬಲವಷ್ಟೇ’ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಬೆಂಬಲ ಇಲ್ಲ. ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದಿಂದ ಕೇವಲ ನೈತಿಕ ಬೆಂಬಲವಷ್ಟೇ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗುವುದಕ್ಕೆ ಬಸ್ ವ್ಯವಸ್ಥೆ ಮಾಡುತ್ತಿದ್ದೇವೆ. ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದಿಂದ ಎಂದಿನಂತೆ ಬಸ್ಸುಗಳ ಸಂಚಾರ ನಡೆಯುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್‌ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...