ಕರ್ನಾಟಕ ಬಜೆಟ್-2023 | ಜನರ ನಂಬಿಕೆ-ವಿಶ್ವಾಸ ಹುಸಿಗೊಳಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಕ್ಷಣಗಳಲ್ಲಿ ಹದಿನಾಲ್ಕನೆಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿ ರಾಜ್ಯದ ಜನರ ಆಶೀರ್ವಾದ ಕೋರಿದ್ದಾರೆ.

“ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ದನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...