ಉಡುಪಿ‌ | ಸಿದ್ದರಾಮಯ್ಯ ಸರಕಾರದ ಬಜೆಟ್ ಆದಿವಾಸಿಗಳಿಗೆ ವಂಚನೆಯ ಬಜೆಟ್ : ಶ್ರೀಧರ ನಾಡ

Date:

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅರಣ್ಯ ಹಾಗೂ ಅರಣ್ಯ ಅಂಚಿನಲ್ಲಿ ವಾಸಿಸುವ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡಗಳು (ಪಿವಿಟಿಜಿ)ಗಾಗಿ ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಘೋಷಣೆ ಹಾಗೂ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗೆ 119 ಮಹಿಳಾ ಕೇರ್‌ಟೇಕರ್ ಹುದ್ದೆಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಸಮಿತಿ ಸ್ವಾಗತಿಸಿದೆ ಎಂದು ಜಿಲ್ಲಾ ಸಂಚಾಲಕ ಶ್ರೀಧರ ನಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಆದಿವಾಸಿ ಅಭಿವೃದ್ಧಿ ನಿಗಮವನ್ನು ಕೇವಲ ನಾಮಮಾತ್ರವಾಗಿ ಸ್ಥಾಪಿಸುವುದರಿಂದ ಪ್ರಯೋಜನವಿಲ್ಲ. ಅದಕ್ಕೆ ಸ್ವತಂತ್ರ ಅಧಿಕಾರ ಹಾಗೂ ಸಮರ್ಪಕ ಬಜೆಟ್ ಅನುದಾನ ಅಗತ್ಯವಿದೆ. ಆದರೆ ಬಜೆಟ್‌ನಲ್ಲಿ ಅದಕ್ಕಾಗಿ ಒಂದು ರೂಪಾಯಿ ಸಹ ಮೀಸಲು ಇರಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೂ ಆಶ್ರಮ ಶಾಲೆಗಳಲ್ಲಿ ಆದಿವಾಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕುರಿತು ಯಾವುದೇ ಸ್ಪಷ್ಟ ಕ್ರಮಗಳಿಲ್ಲ. ಹತ್ತು–ಹದಿನೈದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಕಾಯಂ ಶಿಕ್ಷಕರಾಗಿ ನೇಮಕ ಮಾಡುವ ಕುರಿತು ಘೋಷಣೆ ಇಲ್ಲ. ಆಶ್ರಮ ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಅನುದಾನ ಒದಗಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ಆಧಾರಿತ ಆದಿವಾಸಿಗಳು ಹಾಗೂ ಪಿವಿಟಿಜಿ ಬುಡಕಟ್ಟುಗಳಿಗೆ ನಿವೇಶನ, ಅರಣ್ಯ ಭೂಮಿ ಮಂಜೂರಾತಿ, ಅರಣ್ಯ ಭೂಮಿಯಲ್ಲಿ ಸಾಗುವಳಿದಾರಿಗಳ ಅಭಿವೃದ್ಧಿ ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸುವ ಯಾವುದೇ ಸ್ಪಷ್ಟ ಯೋಜನೆಗಳು ಬಜೆಟ್‌ನಲ್ಲಿ ಕಾಣುತ್ತಿಲ್ಲ. ಈ ಸಮುದಾಯದ ವಸತಿ ನಿರ್ಮಾಣಕ್ಕೆ ನೀಡುವ ಅನುದಾನವನ್ನು 4.5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸುವಂತೆ ಆಗ್ರಹಿಸಿದ್ದರೂ, ಹತ್ತು ವರ್ಷಗಳ ಹಿಂದಿನ ಅದೇ ಅನುದಾನವನ್ನು ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಅನುಸೂಚಿತ ಬುಡಕಟ್ಟು ಉಪಯೋಜನೆಗೆ 12,828 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದ್ದರೂ, ಅದರ ಬಳಕೆಯ ಬಗ್ಗೆ ಪ್ರಶ್ನೆಗಳು ಉಳಿದಿವೆ. ಕಳೆದ ಬಾರಿ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ–ಎಸ್‌ಟಿ ಉಪಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿತ್ತು. ಇದರ ವಿರುದ್ಧ ಹಲವು ಆದಿವಾಸಿ ಹಾಗೂ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ, ಈ ಬಜೆಟ್‌ನಲ್ಲಿ ಅದರ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಸಮಿತಿ ದೂರಿದೆ.

ಉಪಯೋಜನೆಯ ಅನುದಾನವನ್ನು ಆದಿವಾಸಿಗಳ ವೈಯಕ್ತಿಕ ಮತ್ತು ಸಮುದಾಯದ ಅಭಿವೃದ್ಧಿಗೆ ಬಳಸಬೇಕಾದರೂ, ಸರ್ಕಾರ ಅದನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಮುಂದುವರಿದಿದೆ. ಕಳೆದ ಬಾರಿಯ ಬಜೆಟ್‌ನಿಂದ ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ಮಹತ್ತರ ಬದಲಾವಣೆ ಕಾಣದಿದ್ದು, ಅಂಕಿ ಅಂಶಗಳ ಸ್ವಲ್ಪ ಬದಲಾವಣೆ ಹೊರತುಪಡಿಸಿ ಆದಿವಾಸಿ ಸಮುದಾಯಗಳಿಗೆ ವಂಚನೆ ಮುಂದುವರಿದಿದೆ ಎಂದು ಸಮಿತಿ ಖಂಡನೆ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...