ಕರ್ನಾಟಕ | ಮೇ ತಿಂಗಳಲ್ಲಿ 125 ವರ್ಷದಲ್ಲಿಯೇ ಅಧಿಕ ಮಳೆ; 67 ಮಂದಿ ಸಾವು

Date:

ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಹಿಂದೆಂದೂ ಕಾಣದಷ್ಟು ಪ್ರಮಾಣದಲ್ಲಿ ಮಳೆ ಸುರಿದಿದೆ. ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲ ಮಳೆ ಅಬ್ಬರದಿಂದ ಉಂಟಾಗುತ್ತಿರುವ ಅನಾಹುತಗಳು ಮತ್ತು ಅಗತ್ಯ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ರಾಜ್ಯದಲ್ಲಿ 67 ಮಂದಿ ಮಳೆ ಅನಾಹುತಗಳಿಂದ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಮುಂಗಾರು ಪೂರ್ವ ಮಳೆ ಮಾರ್ಚ್‌ ತಿಂಗಳಿನಲ್ಲಿಯೇ ಆರಂಭವಾಗಿತ್ತು. ಇದೀಗ, ಜೂನ್ ಮೊದಲ ವಾರದಲ್ಲಿ ರಾಜ್ಯವನ್ನು ಪ್ರವೇಶಿಸಬೇಕಿದ್ದ ಮುಂಗಾರು ಮಾರುತಗಳು 10 ದಿನ ಮುನ್ನವೇ ರಾಜ್ಯವನ್ನು ಪ್ರವೇಶಿಸಿವೆ. ಪರಿಣಾಮ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೊತೆಗೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಅದರಲ್ಲೂ, ದಕ್ಷಿಣ ಕನ್ನಡ ಜಿಲ್ಲೆಯು ತತ್ತರಿಸಿ ಹೋಗಿದ್ದು, ಸಾವು-ನೋವು, ನಷ್ಟ ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹಗಳು ಎದುರಾಗಿವೆ. ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...