ಕಾರವಾರ | ​ಜೈ ದುರ್ಗಾಮಾತಾ ಸೌಹಾರ್ದ ಸಹಕಾರಿ ಸಂಸ್ಥೆಯಿಂದ ₹56.39 ಕೋಟಿ ವಂಚನೆ: ಫೆ. 2ಕ್ಕೆ ಬೆಂಗಳೂರಿನಲ್ಲಿ ಧರಣಿ

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸದಾಶಿವಗಡದಲ್ಲಿರುವ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಗ್ರಾಹಕರಿಗೆ ಸುಮಾರು 56.39 ಕೋಟಿ ರೂಪಾಯಿ ವಂಚನೆ ಮಾಡಿದ್ದು, ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಇದುವರೆಗೆ ಬಂಧಿಸದಿರುವುದು ಖಂಡನೀಯ ಎಂದು ಸಾಮಾಜಿಕ ಹೋರಾಟಗಾರ ಗಜೇಂದ್ರ ನಾಯ್ಕ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಹಕಾರಿ ಸಂಸ್ಥೆಯು ಕಳೆದ ಆರು ತಿಂಗಳಿನಿಂದ ಯಾವುದೇ ಗ್ರಾಹಕರಿಗೆ ಅವರ ಠೇವಣಿ ಹಣವನ್ನು ಮರುಪಾವತಿಸದೆ ಸತಾಯಿಸುತ್ತಿದೆ.

ಇದರಿಂದಾಗಿ ಸಾವಿರಾರು ಕುಟುಂಬಗಳು ಇಂದು ಬೀದಿಗೆ ಬಿದ್ದಿದ್ದು, ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಆಡಳಿತ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದ್ದು, ಇದರ ಭಾಗವಾಗಿ ಫೆಬ್ರವರಿ 2ರಂದು ಬೆಂಗಳೂರಿನ ವಿಧಾನಸೌಧದ ಬಳಿ ವಂಚಿತ ಗ್ರಾಹಕರೆಲ್ಲರೂ ಸೇರಿ ಬೃಹತ್ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ.

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಂಸ್ಥೆಯ ಮುಖ್ಯಸ್ಥ ಲಿಂಗರಾಜು ಪುತ್ತು ಕಲ್ಗುಟ್ಕರ ಸೇರಿದಂತೆ ಆಡಳಿತ ಮಂಡಳಿಯ 17 ನಿರ್ದೇಶಕರು ಹಾಗೂ 13 ಶಾಖೆಗಳ ವ್ಯವಸ್ಥಾಪಕರು ಸೇರಿ ಸಾರ್ವಜನಿಕರ ಬೆವರಿನ ಹಣವನ್ನು ನಿಯಮಬಾಹಿರವಾಗಿ ಲಪಟಾಯಿಸಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಠೇವಣಿದಾರರಿಗೆ ಅವರ ಹಣ ಮರಳಿಸಬೇಕು.

ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ವಂಚಿತ ಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಫ್. ದೊಡ್ಡಣ್ಣವರ, ಉಪಾಧ್ಯಕ್ಷ ರೋಹಿದಾಸ ತಾಮ್ಸೆ, ಸಹ ಕಾರ್ಯದರ್ಶಿ ಕೃಷ್ಣಾನಂದ ನಾಯ್ಕ, ಖಜಾಂಚಿ ಸಾಯಿನಾಥ ಮೇತ್ರಿ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...