ಕಾರವಾರ | ಕೆಫೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ ‘ಡೆಸರ್ಟಿನೊ ಕೆಫೆ’ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.

ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಎಂದಿನಂತೆ ಕೆಫೆಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿತ್ತು. ಈ ವೇಳೆ ಗ್ರಾಹಕರು ಹಾಗೂ ಕಾರ್ಮಿಕರು ಒಳಗಿದ್ದಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಕೆಫೆಯಾದ್ಯಂತ ದಟ್ಟವಾದ ಹೊಗೆ ಆವರಿಸಿಕೊಂಡಿತು. ಇದರಿಂದ ಗಾಬರಿಗೊಂಡ ಗ್ರಾಹಕರು ಮತ್ತು ಸಿಬ್ಬಂದಿ ಜೀವ ಉಳಿಸಿಕೊಳ್ಳಲು ಹೊರಕ್ಕೆ ಓಡಿ ಬಂದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಪಂದಿಸಿದ ಕಾರಣ ಬೆಂಕಿ ಪಕ್ಕದ ಕಟ್ಟಡಗಳಿಗೆ ಹರಡುವುದು ತಪ್ಪಿದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಪರಾಧ ಮುಕ್ತ ಜಿಲ್ಲೆಯತ್ತ ಹೆಜ್ಜೆ; ಕಾನೂನು ಬಾಹಿರ ಚಟುವಟಿಕೆಗಳಿಗೆ ಬಿತ್ತು ಕಡಿವಾಣ!

ಆದರೂ ಕೆಫೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...