ಕಾರವಾರ: 24 ಗಂಟೆಯೊಳಗೆ ಕಳ್ಳತನ ಪ್ರಕರಣ ಭೇದಿಸಿದ ಶಹರ ಠಾಣೆ ಪೊಲೀಸರು

Date:

ಕಾರವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣವನ್ನು ಕಾರವಾರ ಶಹರ ಪೊಲೀಸ್ ಠಾಣೆಯವರು ಕೇವಲ 24 ಗಂಟೆಯೊಳಗೆ ಭೇದಿಸಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿವರ: ನ.20ರಂದು ಕಾರವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೈಕ್ ಮೇಲಿದ್ದ ಬ್ಯಾಗ್‌ನ್ನು ಕಳ್ಳರು ಎತ್ತಿಕೊಂಡು ಪರಾರಿಯಾಗಿದ್ದರು. ಬ್ಯಾಗ್‌ನಲ್ಲಿದ್ದ ಸುಮಾರು 60 ಗ್ರಾಂ ಚಿನ್ನಾಭರಣಗಳು ಹಾಗೂ ಇತರ ವಸ್ತುಗಳನ್ನು ಸೇರಿಸಿ ಸುಮಾರು 4.85 ಲಕ್ಷ ರೂ. ಮೌಲ್ಯದ ಆಭರಣಗಳು ನಾಪತ್ತೆಯಾಗಿದ್ದವು. ಪ್ರಕರಣದ ಗಂಭೀರತೆಯನ್ನು ಮನಗಂಡ ಪೊಲೀಸರು, ಮಾನ್ಯ ಉತ್ತರಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ದೀಪನ್ ಎಂ.ಎನ್., ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಎಎಸ್‌ಪಿಗಳಾದ ಶ್ರೀ ಕೃಷ್ಣಮೂರ್ತಿ ಹಾಗೂ ಶ್ರೀ ಜಗದೀಶ ಎಂ. ಹಾಗೂ ಕಾರವಾರ ಉಪವಿಭಾಗದ ಡಿಎಸ್ಪಿ ಶ್ರೀ ಎಸ್.ವಿ. ಗಿರೀಶ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದರು.

ತನಿಖೆ ಮತ್ತು ಬಂಧನ: ಶಹರ ಪೊಲೀಸ್ ಠಾಣೆಯ ಪಿಐ ಜಯಶ್ರೀ ಎಸ್.ಎಂ. ಅವರ ನೇತೃತ್ವದಲ್ಲಿ, ಪಿಎಸ್‌ಐ ಬಾಬು ಆಗೇರ (ತನಿಖೆ–1) ಹಾಗೂ ಶ್ರೀಮತಿ ಸುಧಾ ಅಘನಾಶಿನಿ (ಪಿಎಸ್‌ಐ-ತನಿಖೆ–3) ಅವರ ತಂಡ ಘಟನಾ ಸ್ಥಳದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ, ಸಂಶಯಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷಣ ಕ್ಷಣದ ಮಾಹಿತಿ ಜೋಡಣೆಯ ನಂತರ, ಕೇವಲ ಒಂದು ದಿನದೊಳಗೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ʼನಮ್ಮದೇ ಜಮೀನಿಗೆ ಕಾಲಿಟ್ಟರೆ ಕಳ್ಳತನದ ಕೇಸ್ ಹಾಕ್ತಾರೆʼ: ದಲಿತ ಮಹಿಳೆಯರ ಆರೋಪ

ಬಂಧಿತನನ್ನು ರಫೀಕ್ ಖಾನ್ (62) ತಂದೆ ಜಬ್ಬರಖಾನ್, ವೃತ್ತಿ – ಗೌಂಡಿ ಕೆಲಸ, ಸವರಪ್ಪ–ಸದಾಶಿವಗಡ, ಚಿತ್ತಾಕುಲ ಎಂಬಾತನನ್ನು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಸೇರಿದಂತೆ ₹4.85 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಾನೂನು ಪ್ರಕಾರ ಜಪ್ತಿ ಮಾಡಲಾಗಿದೆ.

ಪೊಲೀಸರ ಪ್ರಶಂಸನೀಯ ಕಾರ್ಯ: ಈ ಕಾರ್ಯಾಚರಣೆಯಲ್ಲಿ ಪಿಐ ಜಯಶ್ರೀ ಮಾನೆ, ಪಿಎಸ್‌ಐ ಬಾಬು ಆಗೇರ, ಪಿಎಸ್‌ಐ ಸುಧಾ ಅಘನಾಶಿನಿ ಹಾಗೂ ಸಿಬ್ಬಂದಿಗಳಾದ ಸುಧಾ ನಾಯ್ಕ, ರುದ್ರೇಶ ಮೈತ್ರಾಣಿ, ಶಿವರಾಮ ದೇಸಾಯಿ, ಮಹಮ್ಮದ್ ಇಸ್ಮಾಯಿಲ್ ಕೋಣನಕೇರಿ, ಸಚಿನ್ ನಾಯ್ಕ, ಅರ್ಜುನ ದೇಸಾಯಿ, ಪ್ರತಾಪಕುಮಾರ್ ಎಂ., ನಾಗೇಂದ್ರ ನಾಯ್ಕ, ಗಣೇಶ್ ನಾಯ್ಕ, ಮಾದೇವ ಸಂಗಾಪೂರ, ಪ್ರಕಾಶ ದಂಡಪ್ಪನವರ್ ಮುಂತಾದವರು ಪಾಲ್ಗೊಂಡಿದ್ದರು. ಉತ್ತಮ ಸೇವೆ ಹಾಗೂ ಕ್ಷಿಪ್ರ ಕಾರ್ಯಾಚರಣೆಗೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ದೀಪನ್ ಎಂ.ಎನ್.ವರು ತಂಡವನ್ನು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...