ಕಾರವಾರ | ಪ್ರೀತಿ ನಿರಾಕರಣೆಗೆ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ, ಜೆಡಿಎಸ್ ಜಿಲ್ಲಾ ನಾಯಕಿಯ ಪುತ್ರನ ಹೆಸರು ದೂರಿನಲ್ಲಿ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಪ್ರಚೋದನೆಯಿಂದ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಬಾಡಾದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಆಪಾದಿತನಾಗಿರುವ ಯುವಕ ಚಿರಾಗ್ ಕೊಠಾರಕರ್, ಜೆಡಿಎಸ್ ಪಕ್ಷದ ಜಿಲ್ಲಾ ಮುಖಂಡೆ ಚೈತ್ರಾ ಕೊಠಾರಕರ್ ಅವರ ಪುತ್ರ ಎಂದು ತಿಳಿದುಬಂದಿದೆ.

ಘಟನೆಯ ವಿವರ: ಕಾರವಾರದ ನಂದನಗದ್ದಾ ನಿವಾಸಿಯಾದ ಚಿರಾಗ್ ಚಂದ್ರಾಹಾಸ ಕೊಠಾರಕರ್ ಎಂಬಾತನೇ ಈ ಸಾವಿಗೆ ಕಾರಣ ಎಂದು ಮೃತ ಯುವತಿ ರಿಶೇಲ್ ಅವರ ಪೋಷಕರು ಪೊಲೀಸ್ ದೂರು ನೀಡಿದ್ದಾರೆ. ಆರೋಪಿಯು ರಿಶೇಲ್ ಕುಟುಂಬಕ್ಕೆ ಪರಿಚಯಸ್ಥನಾಗಿದ್ದು, ಪದೇ ಪದೇ ಆಕೆಗೆ ಫೋನ್ ಮಾಡಿ ಮಾತನಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ ಆಕೆಯ ಮನೆಯ ಸುತ್ತಮುತ್ತ ಸುಳಿಯುತ್ತಾ ತನ್ನನ್ನು ಪ್ರೀತಿಸುವಂತೆ ಕಾಡಿಸುತ್ತಿದ್ದ ಎನ್ನಲಾಗಿದೆ. ಆದರೆ, ರಿಶೇಲ್ ಆತನ ಪ್ರೀತಿಯ ಪ್ರಸ್ತಾಪವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಳು.

1000441030
ಆಪಾದಿತ ಚಿರಾಗ್ ಕೊಠಾರಕರ್

ಇದರಿಂದ ಕೆರಳಿದ ಚಿರಾಗ್, ಆಕೆಗೆ ಮಾನಸಿಕವಾಗಿ ಹಿಂಸೆ ನೀಡಲು ಆರಂಭಿಸಿದ್ದನು. “ನೀನು ಬದುಕಿದ್ದು ಪ್ರಯೋಜನವಿಲ್ಲ, ನೀನು ಹೇಗಾದರೂ ಸತ್ತು ಹೋಗು, ನೀನು ಬದುಕಿರುವುದಕ್ಕಿಂತ ಸತ್ತರೆ ಒಳ್ಳೆಯದು” ಎಂದು ಪದೇ ಪದೇ ಹೀಯಾಳಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದನು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಅಜಿತ್ ನಾಯ್ಕ ಹತ್ಯೆ ಕೇಸ್: ಪ್ರಮುಖ ಆರೋಪಿ ದೋಷಿ ಎಂದು ತೀರ್ಪು, ಜನೆವರಿ 13ರಂದು ಶಿಕ್ಷೆ ಪ್ರಮಾಣ ಪ್ರಕಟ

ಚಿರಾಗ್ ನೀಡುತ್ತಿದ್ದ ಈ ಸತತ ಕಿರುಕುಳ ಹಾಗೂ ಆತನ ಮಾತುಗಳಿಂದ ನೊಂದ ರಿಶೇಲ್, ದಿನಾಂಕ 09-01-2026ರಂದು ಮಧ್ಯಾಹ್ನ ಸುಮಾರು 2:30 ಗಂಟೆಗೆ ತನ್ನ ಮನೆಯ ಬೆಡ್‌ರೂಮಿನಲ್ಲಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳ ಸಾವಿಗೆ ಚಿರಾಗ್ ನೀಡಿದ ದುಷ್ಪ್ರೇರಣೆಯೇ ನೇರ ಕಾರಣ ಎಂದು ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಭಾವಿ ರಾಜಕೀಯ ಮುಖಂಡೆಯ ಪುತ್ರ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...