ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರವೇ ಪ್ರಾರಂಭವಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

Date:

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಬಸವರಾಜ‌ ಬೊಮ್ಮಾಯಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಮಾಡಿದರು.

ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ಕೇಂದ್ರ ಹೆದ್ದಾರಿ ಸಚಿವರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಯಾ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸಮೀಕ್ಷೆ ಅಗತ್ಯ: ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ

ಅಲ್ಲದೇ ಇದಕ್ಕೆ ಹೊಂದಿಕೊಂಡು ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...