ಕಾರವಾರ | ರಿಶೇಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಜೆಡಿಎಸ್ ನಾಯಕಿ ಪುತ್ರನ ವಿರುದ್ಧ ವಾಟ್ಸಾಪ್ ಚಾಟ್ ಸಾಕ್ಷ್ಯ ಲಭ್ಯ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಕಾರವಾರದ ಜೆಡಿಎಸ್ ನಾಯಕಿ ಚೈತ್ರಾ ಅವರ ಪುತ್ರ ಚಿರಾಗ್ ನೀಡಿದ ಮಾನಸಿಕ ಕಿರುಕುಳವೇ ಈ ಸಾವಿಗೆ ಕಾರಣ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ, ಮೃತ ಯುವತಿ ಮತ್ತು ಆರೋಪಿ ನಡುವಿನ ವಾಟ್ಸಾಪ್ ಸಂಭಾಷಣೆಯ ವಿವರಗಳು ಈಗ ಹೊರಬಂದಿವೆ.

ಮೃತ ರಿಶೇಲ್ ಹಾಗೂ ಚಿರಾಗ್ ನಡುವಿನ ಚಾಟಿಂಗ್ ಮತ್ತು ವಿಡಿಯೋ ಕಾಲ್ ಮಾಹಿತಿಯನ್ನು ಬಹಿರಂಗಪಡಿಸಿವೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ರಿಶೇಲ್ ಆತನಿಗೆ ವಿಡಿಯೋ ಕಾಲ್ ಮಾಡಿದ್ದಳು ಎನ್ನಲಾಗಿದ್ದು, ವಾಟ್ಸಾಪ್ ಚಾಟ್‌ನಲ್ಲಿ ಚಿರಾಗ್ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಕಂಡುಬಂದಿದೆ.

“ನೀನು ಹೀಗೆ ಮಾತನಾಡಿದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ರಿಶೇಲ್ ಮುನ್ಸೂಚನೆ ನೀಡಿದ್ದರೂ, ಆರೋಪಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕಿರುಕುಳ ಮುಂದುವರಿಸಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕ್ಯಾಥೋಲಿಕ ಧರ್ಮಪ್ರಾಂತ್ಯದ ಮಹಿಳಾ ಘಟಕದ ಅಧ್ಯಕ್ಷೆ ಮೊಬೆಲ್ ಪಿಂಟೋ, “ತಂದೆ-ತಾಯಿಯ ರಾಜಕೀಯ ಪ್ರಭಾವ ಬಳಸಿ ಚಿರಾಗ್ ಯುವತಿಗೆ ಸಂಕಷ್ಟ ತಂದೊಡ್ಡಿದ್ದಾನೆ. ರಿಶೇಲ್ ಶವ ಪತ್ತೆಯಾದಾಗ ಕಿವಿಯಲ್ಲಿ ಇಯರ್ ಫೋನ್ ಇತ್ತು ಮತ್ತು ಮೊಬೈಲ್ ಕೆಳಗೆ ಬಿದ್ದಿತ್ತು.

ಅಂದರೆ ಆಕೆ ಆತನೊಂದಿಗೆ ಮಾತನಾಡುತ್ತಲೇ ಪ್ರಾಣ ಕಳೆದುಕೊಂಡಿದ್ದಾಳೆ. ಅಲ್ಲದೆ, ಆಕೆಯ ದೇಹದ ಮೇಲೆ ಗಾಯದ ಗುರುತುಗಳಿದ್ದು, ಪೊಲೀಸರು ಇದರ ಬಗ್ಗೆ ಸೂಕ್ಷ್ಮ ತನಿಖೆ ನಡೆಸಬೇಕು,” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಪ್ರಕರಣ ನಡೆದು ಹಲವು ದಿನಗಳಾದರೂ ಪೊಲೀಸರು ಈವರೆಗೆ ಆರೋಪಿಯನ್ನು ಬಂಧಿಸಿಲ್ಲ ಅಥವಾ ಆತನ ಮೊಬೈಲ್ ವಶಪಡಿಸಿಕೊಂಡಿಲ್ಲ ಎಂದು ಮುಖಂಡರಾದ ಲಿಯೋ ಲಿವಿಸ್ ಮತ್ತು ಫ್ರೆಂಕಿ ಗುಡಿನೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಆತ್ಮಹತ್ಯೆಗೂ ಮುನ್ನ ರಿಶೇಲ್ ತರಗತಿಗಳಿಗೆ ಹಾಜರಾಗದೆ ಮಾನಸಿಕ ಒತ್ತಡದಲ್ಲಿದ್ದಳು.

ರಾಜಕೀಯ ಒತ್ತಡಕ್ಕೆ ಮಣಿಯದೆ ಪೊಲೀಸರು ತನಿಖೆ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಅವರು ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಸ್ಯಾಮ್ಸನ್ ಡಿಸೋಜಾ, ಕ್ಲೆಮೆಟ್ ಗುಡಿನೋ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...