ಕಾರವಾರ | ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ಪೊಲೀಸ್ ದಾಳಿ: ಕೈದಿ ಬಳಿ ಮೊಬೈಲ್ ಪತ್ತೆ

Date:

ಕಾರವಾರ: ಜಿಲ್ಲಾ ಕಾರಾಗೃಹದ ಮೇಲೆ ಮಂಗಳವಾರ (ನ. 18) ಮುಂಜಾನೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕೈದಿಯೊಬ್ಬನ ಬಳಿ ಮೊಬೈಲ್ ಫೋನ್ ಹಾಗೂ ಒಂದು ಬ್ಯಾರಕ್‌ನಲ್ಲಿ ಬೀಡಿ, ಲೈಟರ್ ಸೇರಿದಂತೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತಂಡದ ಉಸ್ತುವಾರಿ ವಹಿಸಿದ್ದ ಕಾರವಾರ ಸಂಚಾರ ಠಾಣೆಯ ಪಿಎಸ್‌ಐ ಶ್ರೀಕಾಂತ್ ರಾಠೋಡ್ ಅವರು ಜಿಲ್ಲಾ ಕಾರಾಗೃಹ ಕಾರವಾರದ ಜೈಲಿನ ಮೇಲೆ ದಾಳಿ ಮಾಡಿ ಅನೇಕ ವಸ್ತುಗಳನ್ನು ವಶಪಡಿಸಿಕೊಂಡು ಮೇಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ.

ಸಿಕ್ಕಿದ್ದೇನು? ಜೈಲಿನ ಒಳ ಸೆಲ್ ಬ್ಯಾರಕ್‌ನ 8ನೇ ಸೆಲ್‌ನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರ್ ನಿವಾಸಿ, ವಿಚಾರಣಾಧೀನ ಕೈದಿ ಮೊಹಮ್ಮದ್ ನೌಫಲ್ (32) ಎಂಬಾತನ ಬಳಿ ನಿಷೇಧಿತ ಕೀಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ.‌ಅಲ್ಲದೆ, ಇದೇ ಬ್ಯಾರಕ್‌ನ 9ನೇ ಸೆಲ್‌ನಲ್ಲಿ ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಒಂದರಲ್ಲಿ 1 ಬೀಡಿ ಪ್ಯಾಕೆಟ್, 1 ಬೆಂಕಿಪೊಟ್ಟಣ, 1 ಹಳದಿ ಬಣ್ಣದ ಲೈಟರ್ ಹಾಗೂ ಒಣಗಿದ ಸೊಪ್ಪಿನ ಪುಡಿ ತರ ಕಾಣುವ ಸಂಶಯಾಸ್ಪದ ವಸ್ತು ತುಂಬಿದ್ದ 3 ಚಿಕ್ಕ ಪೇಪರ್ ಪ್ಯಾಕೆಟ್‌ಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಗೆ ಜಿಲ್ಲೆಯಾದ್ಯಂತ 116 ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ

ಈ ಸಂಬಂಧ ಪಿಎಸ್‌ಐ ಶ್ರೀಕಾಂತ್ ರಾಠೋಡ್ ಅವರು ನೀಡಿದ ವರದಿಯ ಆಧಾರದ ಮೇಲೆ, ಕಾರವಾರ ಉಪ ವಿಭಾಗದ ಡಿವೈಎಸ್ಪಿ ಎಸ್.ವಿ. ಗಿರೀಶ್ ಅವರು ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ಕಾರಾಗೃಹ ತಿದ್ದುಪಡಿ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...