ಕಾರವಾರ | ಫೆ.21ರಂದು ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಿ.ಡಿ. ಗೋವಿಂದಕುಮಾರ ಸಮ್ಮೇಳನಾಧ್ಯಕ್ಷ

Date:

ಕಾರವಾರ: ನಗರದ ಬಾಡದ ಶಿವಾಜಿ ಶಿಕ್ಷಣ ಸಂಸ್ಥೆಯ ದಿ. ಶಂಕರ ಬಾಬಿ ಸಾವಂತ ಸಭಾಭವನದಲ್ಲಿ ಫೆಬ್ರವರಿ 21ರಂದು ಕಾರವಾರ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ತಾಲೂಕು ಘಟಕದ ಅಧ್ಯಕ್ಷ ರಾಮಾ ಎನ್. ನಾಯ್ಕ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಸತೀಶ ಸೈಲ್, ಅಧ್ಯಕ್ಷರಾಗಿ ತಹಸೀಲ್ದಾರ ನಿಶ್ಚಲ ನರೋನಾ, ಉಪಾಧ್ಯಕ್ಷರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಎನ್. ನಾಯ್ಕ ಹಾಗೂ ಕಾರ್ಯಾಧ್ಯಕ್ಷರಾಗಿ ಮಾಧವ ಬಿ. ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಸಮ್ಮೇಳನಾಧ್ಯಕ್ಷರಾಗಿ ಬುಡಕಟ್ಟು ಸಮುದಾಯದ ಖ್ಯಾತ ಸಾಹಿತಿ, ರಂಗಭೂಮಿ ಹಾಗೂ ಯಕ್ಷಗಾನ ಕಲಾವಿದ ಜಿ.ಡಿ. ಗೋವಿಂದಕುಮಾರ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆ 8 ಗಂಟೆಗೆ ನಡೆಯುವ ರಾಷ್ಟ್ರಧ್ವಜಾರೋಹಣವನ್ನು ತಹಸೀಲ್ದಾರ ನಿಶ್ಚಲ ನರೋನಾ ನೆರವೇರಿಸಲಿದ್ದು, ಪರಿಷತ್ತಿನ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ಹಾಗೂ ನಾಡ ಧ್ವಜಾರೋಹಣವನ್ನು ತಾಲೂಕು ಅಧ್ಯಕ್ಷರು ನೆರವೇರಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹೆಚ್ಚಲಿದೆ ಬಿಸಿಲ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಹೈ-ಅಲರ್ಟ್ ಹಾಗೂ ಮುನ್ನೆಚ್ಚರಿಕೆ

ಬಳಿಕ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಎನ್. ನಾಯ್ಕ ಚಾಲನೆ ನೀಡಲಿದ್ದಾರೆ. ನಂತರ ನಡೆಯುವ ಸಮಾರಂಭದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಪ್ರೇಮಾ ಟಿ.ಎಂ.ಆರ್. ಧ್ವಜ ಹಸ್ತಾಂತರ ಮಾಡಲಿದ್ದಾರೆ ಎಂದು ತಿಳಿಸಿದರು.

ಹಿರಿಯ ಕಲಾವಿದ ಡಾ. ಆರ್.ಜಿ. ಗುಂದಿ ಅಧ್ಯಕ್ಷತೆಯಲ್ಲಿ “ರಂಗಭೂಮಿ ಮತ್ತು ಕಾರವಾರ” ವಿಷಯದ ವಿಚಾರಗೋಷ್ಠಿ ನಡೆಯಲಿದೆ. ನಾಗೇಶ ಅಣೇಕರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆಯ ಕವಿಗಳು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಾಧ್ಯಕ್ಷ ಮಾಧವ ನಾಯಕ ಮಾತನಾಡಿ, ಸಮ್ಮೇಳನಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಮಿತ್ರ ಸಮಾಜ ಮೈದಾನದಿಂದ ಆರಂಭವಾಗುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ 500 ಮೀಟರ್ ಉದ್ದದ ಕನ್ನಡ ಧ್ವಜ ಮೆರವಣಿಗೆಯೂ ಇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಸಾಪದ ಬಾಬು ಶೇಖ್, ಜೆ.ಡಿ. ಮನೋಜೆ, ಕೈರೂನಿಸಾ ಶೇಖ್, ಮಹಾದೇವ ರಾಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...