ಉಡುಪಿ | ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ : ಜಿಲ್ಲಾಧಿಕಾರಿ

Date:

ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಕೈಗೊಂಡಿದ್ದು, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್‌ನಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಟಪಾಡಿ ಜಂಕ್ಷನ್‌ನಲ್ಲಿ ಓವರ್ ಪಾಸ್ ಕಾಮಗಾರಿಯನ್ನು ಈಗಾಗಲೇ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ರಸ್ತೆಗಳ ಮೂಲಕ ಸಂಚರಿಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅದರನ್ವಯ ವಾಹನಗಳು ಸಂಚರಿಸುತ್ತಿದ್ದು, ಇದರಿಂದಾಗಿ ಗ್ರಾಮೀಣ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ವಾಹನಗಳ ಸಂಚಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೆಲವು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರುಗಳಿಂದ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಪರಿಶೀಲನೆ ಮಾಡಿ, ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು, ಟ್ರಕ್‌ಗಳು, ಮೂಡುಬೆಳ್ಳೆ-ದೆಂದೂರುಕಟ್ಟೆ, ಅಲೆವೂರು ಮಾರ್ಗವಾಗಿ ಉಡುಪಿಗೆ ಸಂಚರಿಸುತ್ತಿವೆ. ಈ ರಸ್ತೆಗಳು ಕಿರಿದಾಗಿದ್ದು, ಕೆಲವು ಮೇಲ್ಸೇತುವೆಗಳು ಶಿಥಿಲಗೊಂಡಿವೆ ಎಂದು ದೂರುಗಳಿದ್ದು, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯವರು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಸೇತುವೆ ಸಾಮರ್ಥ್ಯವನ್ನು ಹೆಚ್ಚಿಸುವ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಮಾಜಿ ಸಚಿವರು ಹಾಗೂ ಮುಖಂಡರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಹಿನ್ನೆಲೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸುವ ಮುನ್ನ ಸ್ಥಳೀಯ ಏಳು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ವಿಶ್ವಾಸ ಪಡೆಯುವುದರೊಂದಿಗೆ ಕೈಗೊಳ್ಳಬೇಕಿತ್ತು. ಕೆಲವು ರಸ್ತೆಗಳು ಕಿರಿದಾಗಿದ್ದು, ಭಾರೀ ಒಂದು ವಾಹನ ಸಂಚರಿಸಲು ಅವಕಾಶವಿದೆ. ಎದುರಿನಿಂದ ಸಣ್ಣ ವಾಹನಗಳು ಬಂದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಕೆಲವು ಜಾಗಗಳಲ್ಲಿ ರಸ್ತೆ ಅಗಲೀಕರಣ ಅಗತ್ಯವಿದೆ ಹಾಗೂ ದುರ್ಬಲವಿರುವ ಸೇತುವೆಗಳ ದುರಸ್ಥಿ ಹಾಗೂ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವರೊಂದಿಗೆ ಚರ್ಚಿಸಿ, ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಮಾಡಲಾಗುವುದು ಎಂದರು.

NH KATAPADY OVER PASS MEETING 5

ಸ್ಥಳೀಯ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಬದಲಿ ಮಾರ್ಗ ವಾಹನಗಳ ಸಂಚಾರದಿಂದ ಗ್ರಾಮೀಣ ಭಾಗದ ಜನರುಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಹಾಲಿ ಕಾಮಗಾರಿ ಕೈಗೊಳ್ಳುತ್ತಿರುವ ರಸ್ತೆಯ ಆಜು-ಬಾಜಿನಲ್ಲಿ ಬದಲಿ ಮಾರ್ಗ ಕಲ್ಪಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...