‘ಆಪರೇಷನ್ ಹಸ್ತ’ ಚರ್ಚೆ ನಡುವೆ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

Date:

  • ಸೋಮವಾರ ಸಂಜೆ ಕಾಂಗ್ರೆಸ್‌ ಸೇರಲಿರುವ ಜೆಡಿಎಸ್​, ಬಿಜೆಪಿ ಮುಖಂಡರು
  • ಕುತೂಹಲ ಮೂಡಿಸಿರುವ ಡಿಕೆ ಶಿವಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ

ಸೋಮವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​, ಬಿಜೆಪಿ ಮುಖಂಡರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆಯನೂರು ಮಂಜುನಾಥ್, ಶಿಕಾರಿಪುರ ನಾಗರಾಜ್ ಗೌಡ ಅಧಿಕೃತವಾಗಿ ಕೈ ಹಿಡಿಯಲಿದ್ದಾರೆ.

‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸಹಜವಾಗಿ ‘ಆಪರೇಷನ್ ಹಸ್ತ’ದ ಲೇಪ ಪಡೆದಿದೆ. ಅಧಿಕೃತವಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕಾಂಗ್ರೆಸ್‌ ಸೇರುವುದಾಗಿ ಎಲ್ಲೂ ಹೇಳಿಕೊಂಡಿಲ್ಲ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್‌ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು

ಹಾಗೆಯೇ ‘ಆಪರೇಷನ್​ ಹಸ್ತ’ದಲ್ಲಿ ಭಾರೀ ಸುದ್ದಿಯಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...