ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿ ಪ್ರಕರಣವನ್ನು ತಿರುಚಿರುವ ನೈಜ ಆಪಾದಿತ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.

ಮೇ 25ರಂದು ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಸವರ್ಣೀಯ ದುರುಳನೊಬ್ಬ ಅಮಾನುಷವಾಗಿ ಥಳಿಸಿ, ಹುಲ್ಲಿನ ಮೆದೆಯೊಳಗೆ ಹಾಕಿ ಜೀವಂತವಾಗಿ ಸುಟ್ಟುಹಾಕಿದ್ದ ಎಂದು ಹೇಳಲಾಗಿದೆ. ಆದರೆ, ಈ ಪ್ರಕರಣವನ್ನು ಆತ್ಮಹತ್ಯೆಯೆಂದು ಪೊಲೀಸರು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

ದಲಿತ ಯುವಕನ ಸಾವು ಪ್ರಕರಣದಲ್ಲಿ ಆರೋಪಿಯೊಂದಿಗೆ ಶಾಮೀಲಾಗಿ, ಲಂಚ ಪಡೆದು, ಪ್ರಕರಣವನ್ನು ಪೊಲೀಸರು ತಿರುಚಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆರೋಪಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ದಲಿತ ಯುವಕನ ಸಾವಿಗೆ ನ್ಯಾಯ ದೊರಕಿಸಬೇಕು ಎಂದು ಆಗ್ರಹಿಸಿ ಹಲವಾರು ಸಂಘಟನೆಗಳು ‘ಕೆ.ಆರ್‌ ಪೇಟೆ ಚಲೋ’ ಪ್ರತಿಭಟನೆ ನಡೆಸಿದ್ದವು. ಈ ಬೆನ್ನಲ್ಲೇ, ದಲಿತ ಯುವಕನ ಸಾವಿಗೆ ಸಂಬಂಧಿಸಿದಂತೆ ಎನ್‌ಸಿಆರ್ ದಾಖಲಿಸಿದ್ದ ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಎಫ್‌ಐಆರ್‌ನಲ್ಲಿ ಹತ್ಯೆಯನ್ನು ಆತ್ಮಹತ್ಯೆಯೆಂದು ತಿರುಚಿದ್ದು ಎಎಸ್‌ಐ ಕುಮಾರ್‌ ಅವರಲ್ಲ. ಪ್ರಕರಣ ತಿರುಚುವಲ್ಲಿ ಶಾಮೀಲಾಗಿರುವವರು ಕೆ.ಆರ್.ಪೇಟೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ (ಸಿಐ) ಆನಂದೇಗೌಡ, ಸಬ್‌ಇನ್ಸ್‌ಪೆಕ್ಟರ್‌ ಸುಬ್ಬಯ್ಯ, ದಪೇದಾರ್ ವೈರಮುಡಿ, ಡಿವೈಎಸ್ಪಿ ಚಲುವರಾಜು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಎಂದು ಆರೋಪಿಸಲಾಗಿದೆ. ಈ ಅಧಿಕಾರಿಗಳು ಲಂಚ ಪಡೆದು ಪ್ರಕರಣವನ್ನು ತಿರುಚಿದ್ದಾರೆ. ಈ ಐವರನ್ನೂ ಅಮಾನತು ಮಾಡಿ, ಕ್ರಮ ಕೈಗೊಳ್ಳಬೇಕು ಎಂದು ದ್ರಾವಿಡ ಕನ್ನಡಿಗರು ಚಳುವಳಿ ಸಂಘಟನೆ ಆಗ್ರಹಿಸಿದೆ.

“ಹತ್ಯೆಯಾದ ದಲಿತ ಯುವಕ ಜಯಕುಮಾರ್ ಅವರು ತಮ್ಮ ಹತ್ಯೆಯ ಹಿಂದಿನ ದಿನವೇ ಪೊಲೀಸರಿಗೆ ದೂರು ನೀಡಿದ್ದರು. ಆದರೂ, ಪೊಲೀಸರು ಕ್ರಮ ಕೈಗೊಳ್ಳದೆ, ಆತನಿಗೆ ರಕ್ಷಣೆ ನೀಡದೆ ಲೋಪವೆಸಗಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಪರಿಹಾರ ನೀಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಅವರು ಮೃತದೇಹವನ್ನು ಹೂಳುವ ಬದಲು ಸುಟ್ಟುಹಾಕುವಂತೆ ಒತ್ತಡಹಾಕಿ, ಸುಟ್ಟು ಹಾಕಿಸಿದ್ದಾರೆ. ಮುಂದನ ದಿನಗಳಲ್ಲಿ ಯಾವುದೇ ಪರೀಕ್ಷೆಗೆ ಅಗತ್ಯವಿದ್ದಾಗ ಮೃತದೇಹ ದೊರೆಯದಂತೆ ಮಾಡಿದ್ದಾರೆ” ಎಂದು ಸಂಘಟನೆ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...