ಉಡುಪಿ | ಸರಣಿ ಅಪಘಾತ, ಮಗಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66 ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಉಡುಪಿ ಕಡೆ ಸಾಗುವ ಹೆದ್ದಾರಿ ಮಧ್ಯೆ ಪಲ್ಟಿಯಾಗಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ತಲುಪಿಸಿ, ಕಾಪು ಚಂದ್ರನಗರ ಕಡೆ ಸಾಗುತ್ತಿದ್ದ ಕ್ರೆಸೆಂಟ್ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ಡಿವೈಡ‌ರ್ ದಾಟಿ ಮಂಗಳೂರು ಕಡೆ ಸಾಗುವ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ. ಇದೇ ಸಂದರ್ಭ ಮಂಗಳೂರು ಕಡೆ ಸಾಗುತ್ತಿದ್ದ ಇನ್ನೋವಾ ಕಾರಿಗೂ ಮತ್ತೊಂದು ಕಾರು ಡಿಕ್ಕಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ಡಿವೈಡ‌ರ್ ದಾಟಿ ಮಂಗಳೂರು ಕಡೆ ಸಾಗುವ ಹೆದ್ದಾರಿಯಲ್ಲಿ ಮುಗುಚಿ ಬಿದ್ದಿದೆ. ಇದೇ ಸಂದರ್ಭ ಮಂಗಳೂರು ಕಡೆ ಸಾಗುತ್ತಿದ್ದ ಇನ್ನೋವಾ ಕಾರಿಗೂ ಮತ್ತೊಂದು ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ 3 ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುವ ಸಮಯ ಶಾಲಾ ಬಸ್ ನಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ಟೋಲ್ ಸಿಬ್ಬಂದಿ ಕ್ರೇನ್ ಮೂಲಕ ಬಸ್ಸನ್ನು ಮೇಲೆತ್ತುವಲ್ಲಿ ಸಹಕರಿಸಿದರು.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...