ರಾಯಚೂರು | ಮೌಢ್ಯ ಹೋಗಲಾಡಿಸಲು ವಿಜ್ಞಾನ ಅರಿವು ಅಗತ್ಯವಿದೆ : ಸಚಿವ ಬೋಸರಾಜ್

Date:

ಮೌಢ್ಯ ತೊಲಗಿಸಲು ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸಬೇಕಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ ಹೇಳಿದರು.

ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ತಂತ್ರಜ್ಞಾನ, ಶಾಲಾ ಶಿಕ್ಷಣ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು, ಕೌಶಲ್ಯ, ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಟೆಲಿಸ್ಕೋಪ್ ನೀಡಲಾಗುತ್ತಿದೆ. ಮೌಢ್ಯ ಹೋಗಲಾಡಿಸಲು ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ವೈಜ್ಞಾನಿಕ ಅರಿವು ಮೂಡಿಸಬೇಕಾಗಿದೆ. ವಿಜ್ಞಾನ ಇಲ್ಲದಿದ್ದರೆ ನಾವು ಹೊಸ ಪ್ರಯೋಗಗಳನ್ನು ಹಾಗೂ ತಂತ್ರಜ್ಞಾನ ರೂಪಿಸಲು ಸಾಧ್ಯವಿರಲಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕಾದರೆ ವಿಜ್ಞಾನದ ಮಾಹಿತಿ ಅಗತ್ಯʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಕುಮಾರ್ ನಾಯಕ ಮಾತನಾಡಿ, ‌ʼವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸೃಜನಶೀಲತೆ ಬೆಳೆಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳ ಕಲಿಕೆ ಇನ್ನಷ್ಟು ಪರಿಣಾಮಕಾರಿಯಾಗಿರಲು ಅವರನಗನು ಸಮಸ್ಯೆಗಳ ಪರಿಹಾರಕ್ಕೆ ಪ್ರಾಯೋಗಿಕವಾಗಿ ಪ್ರಶ್ನೆ, ಚರ್ಚೆ, ಸಂಶೋಧನೆ ಚಟುವಟಿಕೆಗಳಿಗೆ ಒತ್ತು ಕೊಟ್ಟು ಪ್ರೇರೇಪಿಸಬೇಕು. ವಿಜ್ಞಾನದ ಅಗತ್ಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಅವರನ್ನು ಸಜ್ಜುಗೊಳಿಸಬೇಕು. ಮಕ್ಕಳಲ್ಲಿ ಮೌಢ್ಯ ತೊಲಗಿದರೆ ವಿಜ್ಞಾನ ಬೆಳೆಯುತ್ತದೆʼ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ.ಬಡಿಗೇರ್, ಕಾಂಗ್ರೆಸ್ ಮುಖಂಡ ಜಯಣ್ಣ, ಕೆ.ಶಾಂತಪ್ಪ ರುದ್ರಪ್ಪ ಅಂಗಡಿ, ಸೈಯದ್ ಹಫೀಜುಲ್ಲಾ ಸೇರಿದಂತೆ ವಿಜ್ಞಾನ ಕೇಂದ್ರದ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

ವರದಿ: ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...