ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

Date:

ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಎಲ್ಲ ಬಗೆಯ ಮರಳು ಮತ್ತು ಮರದ ದಿಮ್ಮಿಗಳನ್ನು ಸಾಗಿಸುವ, 18,500 ಕೆ.ಜಿಗಿಂತ ಹೆಚ್ಚಿನ ಸರಕು ಸಾಗಿಸುವ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್, ಆರ್ಟ್‌ಕ್ಯುಲೇಟೆಡ್ ವಾಹನಗಳ ಸಂಚಾರವನ್ನು ಮಳೆ ಮುಗಿಯುವವರೆಗೆ ಜಿಲ್ಲಾದ್ಯಂತ ನಿಷೇಧಿಸಲಾಗಿದೆ.

ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣದ ವಾಹನಗಳಷ್ಟೇ ಸಂಚರಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಬಂಧ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಸಂಚರಿಸಬಹುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 116 ರಂದು ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಅನುಮತಿ ಇದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ

“ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ” ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...