ಕೊಡಗು ಜಿಲ್ಲೆ, ಪೊನ್ನಂಪೇಟೆಯ ಸಿಐಪಿಯು ಕಾಲೇಜಿನಲ್ಲಿ ವೃತ್ತಿಮಾರ್ಗದರ್ಶನ ಕುರಿತಾದ ಕಾರ್ಯಗಾರದಲ್ಲಿ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಮಾಜಿ ಪಿಆರ್‌ಒ ಜಯಪ್ರಕಾಶ್ ರಾವ್ ಮಾತನಾಡಿ ಇಂದಿನ ‘ಯುವಜನತೆ ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಬೇಕಿದೆ’ ಎಂದು ಕಿವಿ ಮಾತು ಹೇಳಿದರು.
“ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ, ವಿದ್ಯಾರ್ಥಿ ದೆಸೆಯಿಂದಲೇ ಭವಿಷ್ಯದ ಕನಸುಗಳನ್ನು ಕಾಣಬೇಕು. ಅವುಗಳನ್ನು ಸಾಕಾರಗೊಳಿಸಿಕೊಳ್ಳುವುದರ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಆಗ ಗುರಿ ಸಾಧಿಸಲು ಸಾಧ್ಯ. ದೇಶದ ಪ್ರತಿಯೊಬ್ಬ ಪ್ರಜೆ ಕೂಡ ರಾಷ್ಟ್ರಾಭಿಮಾನ ಹೊಂದಬೇಕು. ದೇಶ ಸ್ವಾವಲಂಬಿಯಾಗಲು ಅಗತ್ಯ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಬದಲು ನಮ್ಮ ದೇಶದಲ್ಲೇ ಉತ್ಪಾದನೆ ಮಾಡಲು ಪ್ರಾರಂಭಿಸಿದಾಗ ದೇಶದ ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಬಹುದೆಂದು” ತಿಳಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಕೊಡಗಿನ ಆದಿವಾಸಿ, ದಲಿತ, ಶೋಷಿತರ ಬದುಕು ಹಸನಾಗಲಿಲ್ಲ; ನಿರೀಕ್ಷೆ ತಪ್ಪಲಿಲ್ಲ!

ಕಾರ್ಯಕ್ರಮದಲ್ಲಿ ಸಿ.ಐ.ಪಿ.ಯು ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ, ವೃತ್ತಿಮಾರ್ಗದರ್ಶನ ಸಮಿತಿಯ ಸಂಚಾಲಕಿ ಪ್ರೊ ಪಿ.ಜೆ. ಅನುರಾಧ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?





