ಕೊಡಗು | ಡ್ರಾಪ್ ಕೇಳಿದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

Date:

ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜುಲೈ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡ್ರಾಪ್ ಕೇಳಿದ ಅಪ್ರಾಪ್ತ ಬಾಲಕಿ‌ ಮೇಲೆ ತಮ್ಮ‌ ಜೊತೆಯಲ್ಲಿ‌ ಬಂದಿದ್ದ ಯುವಕರೇ ಅತ್ಯಾಚಾರ ನಡೆಸಿದ್ದಾರೆಂದು ತಿಳಿದುಬಂದಿದ್ದು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ಕುಟ್ಟ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಾಥಂಗಾಲ ನಿವಾಸಿಗಳಾದ ನವೀಂದ್ರ (24), ಅಕ್ಷಯ್ (27), ಕೇರಳದ ತೋಳಪಟ್ಟಿಯ ನಾಡುಂಡನ ಕಾಲೋನಿಯ ರಾಹುಲ್ (21), ಮನು (25) ಮತ್ತು ಸಂದೀಪ್ (27) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನಲೆ

ಕುಟ್ಟದಿಂದ ನಾಗರಹೊಳೆ ಕಡೆಗೆ ಹೋಗುವ ಮಾರ್ಗದಲ್ಲಿ ಜುಲೈ 9ರಂದು ಇಬ್ಬರು ಅಪ್ರಾಪ್ತೆಯರು ಹಾಗೂ ಮೂರು ಮಂದಿ ಯುವಕರು ತೆರಳುತ್ತಿದ್ದರು. ಈ ವೇಳೆ ಕುಟ್ಟ ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಕಾರಿನಲ್ಲಿದ್ದ ಇಬ್ಬರು ಅಪರಿಚಿತರೊಂದಿಗೆ ತಮ್ಮನ್ನು ನಾಗರಹೊಳೆ ಕಡೆ ಬಿಡುವಂತೆ ಬಾಲಕಿಯರು ಕೇಳಿದ್ದರು. ಹೀಗಾಗಿ ಕಾರಿನಲ್ಲಿ ಇಬ್ಬರು ಅಪ್ರಾಪ್ತೆಯರು ಮತ್ತು ಮೂರು ಮಂದಿ ಯುವಕರು ಪ್ರಯಾಣಿಸಿದ್ದರು.

ಮಾರುತಿ 800 ಕಾರಿನಲ್ಲಿ ಬಾಲಕಿಯರು ನಾಗರಹೊಳೆ ಕಡೆ ತೆರಳಿದ್ದು, ದಾರಿ ಮಧ್ಯೆ ಕಾಫಿ ತೋಟದಲ್ಲಿ ಅಪರಿಚಿತರಾದ ನವೀಂದ್ರ, ಅಕ್ಷಯ್ ಎಂಬುವವರಿಂದ ಓರ್ವ ಬಾಲಕಿ ಮೇಲೆ  ಅತ್ಯಾಚಾರ ನಡೆದಿದೆ. ಅಪ್ರಾಪ್ತೆಯರ ಜತೆಯಲ್ಲೇ ಇದ್ದ ರಾಹುಲ್, ಮನು, ಸಂದೀಪ್ ಎಂಬುವವರು ಮತ್ತೋರ್ವ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತ; ಪ್ರಕರಣ ದಾಖಲಿಸಲು ಎಸ್ಎಫ್ಐ‌ ಒತ್ತಾಯ

ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...