ಕೊಡಗು | ಉಂಗುರ ನುಂಗಿ ಎಂಟು ತಿಂಗಳ ಮಗು ಸಾವು

Date:

ಆಟವಾಡುವಾಗ ಉಂಗುರ ನುಂಗಿದ್ದ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕರಡಿಗೋಡಿನಲ್ಲಿ ನಡೆದಿದೆ.

ರಿಜ್ವಾನ್​ ಎಂಬುವವರ ‌ಮಗು ಮುನೀರ್ ಮೃತ ಹಸುಳೆ. ಆಟವಾಡುವ ಸಮಯದಲ್ಲಿ ಮಗು ಆಕಸ್ಮಿಕವಾಗಿ ಉಂಗುರವನ್ನು ನುಂಗಿದೆ. ಅದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಮಗುವಿಗೆ ತೀವ್ರ ಉಸಿರಾಟದ ತೊಂದರೆಯಿದ್ದಿದ್ದರಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಗುವಿನ ಆರೋಗ್ಯ ತಪಾಸಣೆ ನಡೆಸಿದ ವೈದ್ಯರ ತಂಡ ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಮಗು ಗುರುವಾರ ಬೆಳಿಗಿನ ಜಾವ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...