ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

Date:

ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್‌ನ ಅತೀಕ್ ಎಂಬಾತನ ಬಳಿ ಹೇಳಿದ್ದಾನೆ. ಆತ ಕಾಸರಗೋಡು ಜಿಲ್ಲೆಯಿಂದ ಓರ್ವ ಮಂತ್ರವಾದಿಯನ್ನು ಕರೆಸಿದ್ದಾನೆ. ಮಂತ್ರವಾದಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತದನಂತರ ಆಸೀಫ್ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆಯಲ್ಲಿ ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರನ್ನು ನಂಬಿಸಿದ್ದಾನೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರಿಸಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ. ಆಸಿಫ್‌ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

ಇದನ್ನು ಓದಿದ್ದೀರಾ? ಸೀಳು ಮಾತಿನಿಂದ ಸ್ಪಷ್ಟ ಮಾತಿನೆಡೆಗೆ

ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...